ನಿಯಮಿತ ರಕ್ತದಾನ ಆರೋಗ್ಯಕರ

17 skpp 1
Published on

ಸಕಲೇಶಪುರ: ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರು ವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಪಟ್ಟಣದ ಪುರಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಉದ್ಘಾಟಿಸಿದರು. ನಂತರ ಮಾತನಾಡಿ, ರಕ್ತದಾನದಿಂದ ಉತ್ತಮ ಆರೋಗ್ಯಕ್ಕೆ ಹೊಂದಬಹುದು ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಆರೋಗ್ಯವಂತ ವ್ಯಕ್ತಿ ಗಳು ಯಾವುದೇ ಹಿಂಜರಿಕೆ ಇಲ್ಲದೆ ನಿಯಮಿತವಾಗಿ ರಕ್ತದಾನ ಮಾಡುವುದು ಒಳ್ಳೆಯದು ಎಂದರು.

ಶಿಬಿರದಲ್ಲಿ ಸುಮಾರು 80ಕ್ಕೂ ಅಧಿಕ ಜನ ರಕ್ತದಾನ ಮಾಡಿದರು. ಈ ಪೈಕಿ ಯುವತಿಯರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ್ದು ವಿಶೇಷ.
ಪಕ್ಷದ ತಾಲೂಕು ಅಧ್ಯಕ್ಷ ಮಂಜುನಾಥ್ ಸಂಘಿ, ಯುವ ಮೋರ್ಚಾ ಅಧ್ಯಕ್ಷ ಜಿತೇಂದ್ರ, ಖಜಾಂಚಿ ಯಸಳೂರು ಪ್ರಸನ್ನ, ರೈತ ಮೋರ್ಚಾ ಅಧ್ಯಕ್ಷ ಬಾಗೆ ಮೋಹನ್ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net