ನಿರಂತರ ಅಧ್ಯಯನಶೀಲರಾದರೆ ಮಾತ್ರ ಉತ್ತಮ ಶಿಕ್ಷಕರರಾಗಲು ಸಾಧ್ಯ

SKP WEB 33333
Published on

ಶಿಕಾರಿಪುರ: ಶಿಕ್ಷಕರು ಸೃಜನಶೀಲರಾಗಿ ನಿರಂತರ ಕಲಿಕೆಯನ್ನು ವೃತ್ತಿ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಶಿಕ್ಷಕರಾಗಲು ಸಾಧ್ಯ ಎಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಜಿ.ಎಸ್.ಶಿವಕುಮಾರ್ ಅಭಿಪ್ರಾಯಪಟ್ಟರು.

ಸೋಮವಾರ ಶಿಕಾರಿಪುರದ ಕುಮದ್ವತಿ ಪಪೂ ಕಾಲೇಜಿನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿ, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ. ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ ಅಭಿವೃದ್ಧಿಗೆ ಜೀವನವನ್ನು ಮುಡುಪಾಗಿಟ್ಟಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾರತೀಯರ ಮನದಲ್ಲಿ ಇಂದಿಗೂ ಚಿರಸ್ಥಾಯಿಯಾಗಿದ್ದಾರೆ ಎಂದರು.

ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಎಂ.ವೀರೇಂದ್ರ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಪ್ರವೀಣ್ ಪಾಟೀಲ್, ಮಾನ್ಯಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net