ನಿರಂತರ ಪರಿಶ್ರಮದಿಂದ ಉತ್ತಮ ಸಾಧನೆ ಸಾಧ್ಯ

14blrp2
ಬೇಲೂರು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪಾಲಕರ ಸಭೆಯಲ್ಲಿ ವಿಜಯವಾಣಿ ಪತ್ರಿಕೆಯ ವಿದ್ಯಾರ್ಥಿ ಮಿತ್ರವನ್ನು ಗಣ್ಯರು ಪ್ರದರ್ಶಿಸಿದರು. ಎಸ್.ಎಂ.ರಾಜು, ಕೆ.ಪಿ.ನಾರಾಯಣ್, ರವಿಕುಮಾರ್ ಇತರರು ಇದ್ದರು.
Published on

ಬೇಲೂರು: ಬೆಳೆಯುವ ಪೈರು ಮೊಳಕೆಯಲಗ್ಲೇ ಎಂಬಂತೆ ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ವಿದ್ಯೆಯತ್ತ ಹೆಚ್ಚು ಆಸಕ್ತಿ ವಹಿಸಿ ಮುನ್ನಡೆದರೆ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಎಸ್.ಎಂ.ರಾಜು ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ವಿದ್ಯಾರ್ಥಿಗಳ ಪಾಲಕರ ಸಭೆಯಲ್ಲಿ ವಿಜಯವಾಣಿ ಪತ್ರಿಕೆಯ ವಿದ್ಯಾರ್ಥಿ ಮಿತ್ರ ಪತ್ರಿಕೆ ವಿತರಿಸಿ ಮಾತನಾಡಿದ ಅವರು, ಪಾಲಕರ ಶ್ರಮವನ್ನು ವಿದ್ಯಾರ್ಥಿಗಳು ಅರಿತು ವಿದ್ಯಾಭ್ಯಾಸ ಮಾಡಿ ದೇಶದ ಉತ್ತಮ ಪ್ರಜೆಗಳಾಗಬೇಕು. 10 ಮತ್ತು 12ನೇ ತರಗತಿಗಳ ವಿದ್ಯಾರ್ಥಿಗಳಿಗಾಗಿ ವಿಜಯವಾಣಿ ಪತ್ರಿಗೆ ಹೊರ ತಂದಿರುವ ವಿದ್ಯಾರ್ಥಿ ಮಿತ್ರ ಪತ್ರಿಕೆಯಲ್ಲಿನ ವಿಷಯಗಳು ಹೆಚ್ಚು ಸಹಕಾರಿಯಾಗಿರುವುದರಿಂದ ದಿನನಿತ್ಯ ಓದುವ ಮೂಲಕ ಜ್ಞಾನ ಸಂಪಾದಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಮಾತನಾಡಿ, 10ನೇ ತರಗತಿ ಪರೀಕ್ಷೆಯಲ್ಲಿ ತಾಲೂಕಿಗೆ ಮೊದಲ 10 ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ಮತ್ತು 8, 9ನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸಿದ ಮೊದಲ 6 ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದ್ದೇವೆ. ಇದೇ ರೀತಿ ಶಾಲೆಯ ಎಲ್ಲ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಮುಂದಾಗಬೇಕು. ಜತೆಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿ ಮಿತ್ರ ಪತ್ರಿಕೆಯಲ್ಲಿನ ವಿಷಯವನ್ನು ಓದಿ ನಿಮ್ಮ ಮುಂದಿನ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು.
ಸಭೆಯಲ್ಲಿ ಇಸಿಒ ರವಿಕುಮಾರ್, ಮುಖ್ಯ ಶಿಕ್ಷಕ ಚಂದ್ರಶೇಖರ್.ಎಚ್.ಕೆ, ಶಾಲೆಯ ಶಿಕ್ಷಕರು, ಪಾಲಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net