ನಿರಂತರ ಪರಿಶ್ರಮದಿಂದ ಸಾಧನೆ ಸಾಧ್ಯ

Oplus_16908290
Oplus_16908290
Published on

ಚಿಕ್ಕೋಡಿ: ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಅಧ್ಯಯನ ಮಾಡಿ ಸಾಧನೆಯತ್ತ ಗಮನಹರಿಸಬೇಕು ಎಂದು ಸದಲಗಾ ಸರ್ಕಾರಿ ಪಪೂ ಕಾಲೇಜು ಉಪನ್ಯಾಸಕ ವಿರೇಶ ಪಾಟೀಲ ಹೇಳಿದರು.

ಇಲ್ಲಿನ ಕೆಎಲ್‌ಇ ಸಂಸ್ಥೆಯ ಸಿ.ಬಿ.ಕೋರೆ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳ ಪ್ರವೇಶ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಕಲಿಯಬೇಕು. ತಾಂತ್ರಿಕ ಯುಗದಲ್ಲಿ ಅಂಕಗಳಿಗಿಂತ ಕೌಶಲ ಹೊಂದುವುದು ಅವಶ್ಯ ಎಂದರು.

ಕೆಎಲ್‌ಇ ಸಂಸ್ಥೆಯ ಸಿ.ಬಿ.ಕೋರೆ ಪಾಲಿಟೆಕ್ನಿಕ್ ಪ್ರಾಚಾರ್ಯ ಡಾ.ದರ್ಶನಕುಮಾರ ಬಿಳ್ಳೂರ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಗುರುಗಳು ಹಾಗೂ ಪಾಲಕರ ಪಾತ್ರ ಪ್ರಮುಖವಾಗಿದೆ. ಪಾಲಕರು ಮಕ್ಕಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಿ ಕಾಲೇಜಿನ ಸೌಲಭ್ಯ ಬಳಸಿಕೊಂಡು ಯಶಸ್ಸು ಸಾಧಿಸಬೇಕು. ಪಠ್ಯಕ್ರಮದ ಜತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆ, ಇಂಟರ್ನ್ಶಿಪ್, ಕೈಗಾರಿಕಾ ಕೇಂದ್ರ ಭೇಟಿ, ಟೆಕ್ನಿಕಲ್ ಟಾಕ್ ಹಮ್ಮಿಕೊಂಡು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಕೌಶಲಾಭಿವೃದ್ಧಿಯತ್ತ ಗಮನಹರಿಸಲಾಗುವುದು ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಶಕುಂತಲಾ ಕಮತೆ, ಸ್ವಾಮಿ ಮೊಕ್ಷಾತ್ಮಾನಂದನಜಿ ಮಹಾರಾಜ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವರು ಎಂದರು.

ಬಿ.ಕೆ.ಪಾಟೀಲ ಸ್ವಾಗತಿಸಿದರು. ತನ್ವಿ ಕೆ. ಮತ್ತು ಅಥರ್ವ ಕರಾಡೆ ನಿರೂಪಿಸಿದರು. ಮಾನಸಾ ವೈ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net