

ಕೊಪ್ಪಳ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಜು.27(ಗುರುವಾರ) ಶಾಲಾ-ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಆದೇಶಿಸಿದ್ದಾರೆ.
ಬುಧವಾರ ಮಧ್ಯಾಹ್ನದಿಂದ ಸತತ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ವರದಿ ಅನುಸಾರ ಇನ್ನು ಮೂರ‌್ನಾಲ್ಕು ದಿನ ನಿರಂತರ ಮಳೆಯಾಗುವ ಸಾಧ್ಯತೆ ಇದೆ. ಮುಂಜಾಗ್ರತ ಕ್ರಮವಾಗಿ ಹಾಗೂ ಮಕ್ಕಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಜುಲೈ 27ರಂದು ಜಿಲ್ಲಾದ್ಯಂತ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.