ನಿರಂತರವಾಗಿ ಅನ್ಯಾಯ

13 YERRISWAMY 06
Published on

ಬಳ್ಳಾರಿ : ಕಲ್ಯಾಣ ಕರ್ನಾಟಕಕ್ಕೆ 371 ನೇ (ಜೆ) ಸಂವಿಧಾನದಲ್ಲಿ ತಿದ್ದುಪಡಿಯಾಗಿ ಹತ್ತು ವರ್ಷಗಳು ಕಳೆದಿವೆ. ಅದರೆ, ಅನುಷ್ಠಾನದಲ್ಲಿ ಅನ್ಯಾಯವಾಗುತ್ತಿದೆ ಎಂದು ಹೈದರಾಬಾದ್ ಕರ್ನಾಟಕದ ಹೋರಾಟ ಸಮಿತಿಯ ಜಿಲ್ಲಾದ್ಯಕ್ಷ ಎಸ್. ಪನ್ನರಾಜ್ ಹೇಳಿದರು.
ನಗರದ ಎಸ್‌ಎಸ್‌ಎ ಕಾಲೇಜಿನಲ್ಲಿ ಅಂತರ ವಿಭಾಗಗಳು ಆಯೋಜಿಸಿದ್ದ 371 (ಜೆ) ಸಮರ್ಪಕ ಅನುಷ್ಠಾನ ಏನು ? ಏಕೆ? ಹೇಗೆ? ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಹಳ ಮುಖ್ಯವಾಗಿ ಶಿಕ್ಷಣ, ಉದ್ಯೋಗ ಆರೋಗ್ಯ ಕ್ಷೇತ್ರಗಳಲ್ಲಿ ಆಗುವ ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಆರಂಭದಲ್ಲಿ ಹೈದರಾಬಾದ್ ಕರ್ನಾಟಕದ ವ್ಯಾಪ್ತಿಗೆ ಐದು ಜಿಲ್ಲೆಗಳನ್ನು ಮಾತ್ರ ಸೇರಿಸಲಾಗಿತ್ತು. ನಂತರ ಹೋರಾಟದ ಪ್ರತಿಫಲವಾಗಿ ಬಳ್ಳಾರಿಯನ್ನು ಸೇರಿಸಲಾಯಿತು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸಮಿತಿಗೆ ಕೇಂದ್ರ ಸರ್ಕಾರದಿಂದ ಇದುವರೆಗೂ ಸಮರ್ಪಕವಾಗಿ ಹಣ ಬಿಡುಗಡೆಯಾಗದೆ ಇರುವುದು ದುರಂತದ ಸಂಗತಿಯಾಗಿದೆ. ಪ್ರಸ್ತುತ ಅನುಷ್ಠಾನದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ನಾವೆಲ್ಲರೂ ದನಿ ಎತ್ತದಿದ್ದರೆ ಈ ಭಾಗದ ಜನ ಸಾಕಷ್ಟು ಅವಕಾಶಗಳಿಂದ ವಂಚಿತರಾಗುತ್ತಾರೆ ಎಂದು ಎಚ್ಚರಿಸಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಹೊನ್ನುರಾಲಿ , ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಪ್ರಹ್ಲಾದ್ ಚೌದ್ರಿ, ಪ್ರಾಂಶುಪಾಲ ಡಾ.ಎಚ್.ಕೆ.ಮಂಜುನಾಥ ರೆಡ್ಡಿ ಮಾತನಾಡಿದರು. ಪ್ರಾಧ್ಯಾಪಕರಾದ ಡಾ.ಹುಚ್ಚುಸಾಬ್ , ಘಂಟೆಪ್ಪ ಶೆಟ್ಟಿ , ಸಿದ್ದೇಶ್ , ಶ್ರೀನಿವಾಸ್ ,ನೇತ್ರಾವತಿ, ರುದ್ರಮ್ಮ, ಸುಜಾತ, ವೀರೇಶ , ತಿಪ್ಪೇರುದ್ರ , ಶ್ರೀನಿವಾಸ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net