

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದಿAದ ರಾಜ್ಯಮಟ್ಟದ ಕಾರ್ಯಾಗಾರ ಮತ್ತು ಸಮಾವೇಶವನ್ನು ಬೆಂಗಳೂರಿನ ಅರಮನೆ ಆವರಣದ ಗೆಟ್ ನಂಬರ್ ೯ರ ಪ್ರಿನ್ಸ್ ಶೈನ್ ನಲ್ಲಿ ಏ. ೪ರಂದು ಬೆಳಗ್ಗೆ ೧೦.೩೦ಕ್ಕೆ ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಎ.ಗೋಪಾಲಕೃಷ್ಣ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ನಿವೃತ್ತ ನೌಕರರಿಗೆ ೭ನೇ ವೇತನ ಶ್ರೇಣಿಯನ್ನು ಮಂಜೂರು ಮಾಡಿದಕ್ಕೆ ಅಭಿನಂದಿಸಲು ಹಾಗೂ ನಿವೃತ್ತ ನೌಕರರ ಇನ್ನುಳಿದ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವ ಉz್ದೆÃಶದಿಂದ ಈ ಸಮಾವೇಶ ಆಯೋಜಿಸಲಾಗಿದೆ ಎಂದರು.
ಏಳನೇ ವೇತನ ಆಯೋಗದ ವರದಿಯ ಶಿಫಾರಸ್ಸಿನಂತೆ ವಿವಿಧ ಬೇಡಿಕೆಗಳನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಹಾಗೂ ಸರ್ಕಾರದ ಗಮನಕ್ಕೆ ತಂದರೂ ಇದುವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಹೀಗಾಗಿ ಸಮಾವೇಶದ ಉದ್ಘಾಟನೆಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಇತರ ಸದಸ್ಯರನ್ನು ಅದೇ ವೇದಿಕೆಯಲ್ಲಿ ಒತ್ತಾಯಿಸಲಾಗುವುದು ಎಂದು ಹೇಳಿದರು.
ಸರ್ಕಾರಿ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ನಗದುರಹಿತ ಆರೋಗ್ಯ ಭಾಗ್ಯ ಸಂಧ್ಯಾ ಕಿರಣ ಯೋಜನೆ ಅನುಷ್ಠಾನಗೊಳಿಸಬೇಕು. ೭೦ ರಿಂದ ೮೦ ವರ್ಷದೊಳಗಿನ ನಿವೃತ್ತ ನೌಕರರಿಗೆ ಶೇ.೧೦ರ ಮೂಲ ಪಿಂಚಣಿಯಲ್ಲಿ ಆರ್ಥಿಕ ಸೌಲಭ್ಯ ನೀಡಬೇಕು. ೭ನೇ ವೇತನ ಆಯೋಗದ ವರದಿಯಂತೆ ೨೦೨೨ರ ಜು. ೧ರಿಂದ ನಿವೃತ್ತಿ ಹೊಂದಿದ ಸರ್ಕಾರಿ ನೌಕರರಿಗೆ ವೇತನ ನಗದೀಕರಣ ಬಿಟ್ಟು ಇತರೆ ಆರ್ಥಿಕ ಸೌಲಭ್ಯ ನೀಡಬೇಕು. ನಿವೃತ್ತ ನೌಕರರ ಅಂತ್ಯಸAಸ್ಕಾರಕ್ಕಾಗಿ ಅನುದಾನ ನೀಡಬೇಕು ಎಂದು ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಈ ಎಲ್ಲಾ ಅಂಶಗಳ ಬಗ್ಗೆ ಕುಲಂಕುಶವಾಗಿ ಚರ್ಚಿಸುವ ಉz್ದÉÃಶದಿಂದ ಪೂರ್ವ ಸಿದ್ಧತೆಗಾಗಿ ಮಾ. ೧೯ರಂದು ಚಿಕ್ಕಮಗಳೂರಿನ ಸಂಘದ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸರ್ವ ಸದಸ್ಯರ ಸಭೆ ಕರೆಯಲಾಗಿದೆ. ಈ ಸಭೆಗೆ ಎಲ್ಲಾ ಸದಸ್ಯರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಎಚ್.ಕೆ.ಕೃಷ್ಣಮೂರ್ತಿ, ರಾಜ್ಯ ಪರಿಷತ್ ಸದಸ್ಯ ಬಿ.ಶಿವಣ್ಣ, ಖಜಾಂಚಿ ಕಾಳಯ್ಯ ಮತ್ತಿತರರಿದ್ದರು.