ನಿವೃತ್ತ ಮುಖ್ಯ ಶಿಕ್ಷಕ ಟಿ.ಪುರುಷೋತ್ತಮಗೆ ಸನ್ಮಾನ

07 KRN-1
Published on

ಕೆ.ಆರ್.ನಗರ: ಸಾಲಿಗ್ರಾಮ ತಾಲೂಕು ಕೋಗಿಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಟಿ.ಪುರುಷೋತ್ತಮ ಅವರನ್ನು ಸನ್ಮಾನಿಸಲಾಯಿತು.

ಪಟ್ಟಣದ ಸಿಎಂ ರಸ್ತೆಯಲ್ಲಿರುವ ಸಾಮರಸ್ಯ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವ ಸಲಹೆಗಾರ ರಾಜಶೇಖರ್ ಮಾತನಾಡಿ, 27 ವರ್ಷಗಳಿಂದ ಶಿಕ್ಷಕ ವೃತ್ತಿಯನ್ನು ನಿಷ್ಠೆಯಿಂದ ನಿರ್ವಹಿಸಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿದ್ದಾರೆ. ಅವರ ಕಾರ್ಯ ವೈಖರಿ ಇತರರಿಗೆ ಮಾದರಿ ಎಂದು ಹೇಳಿದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎನ್.ಸ್ವಾಮಿ, ಮಾಜಿ ಅಧ್ಯಕ್ಷರಾದ ಒಂಟಿಮನೆ ನಾಗರಾಜು, ಸಿ.ಎನ್.ಪ್ರಭು, ಕೃಷ್ಣನಾಯಕ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸೈಯದ್ ರಿಜ್ವಾನ್, ಡಿ.ಟಿ.ಕುಮಾರ್, ಸಾಮರಸ್ಯ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶ್ರೀಧರ್, ಉಪಾಧ್ಯಕ್ಷ ಗೋವಿಂದರಾಜು, ನಿರ್ದೇಶಕರಾದ ಸಿ.ಎಸ್.ಮಂಜುನಾಥ್, ಮಂಜುರಾಜು, ಕೃಷ್ಣನಾಯಕ, ಶಿವಮೂರ್ತಿ, ಮುರಳೀಧರ್, ಶೀಲಾ, ಕೆ.ಟಿ.ಸ್ವಾಮಿ, ಕಾರ್ಯದರ್ಶಿ ಕೆ.ಎಸ್.ಗಂಗಾಧರ್, ಸಹ ಕಾರ್ಯದರ್ಶಿ ವಿಜಯ್, ಪ್ರಗತಿ ಪರ ರೈತ ಸತ್ಯಪ್ಪ, ಶಿಕ್ಷಕರಾದ ಸಿ.ಜೆ.ಪುಟ್ಟಸ್ವಾಮಿ, ರವಿ, ಪುಟ್ಟಯ್ಯ, ನಾಗರಾಜು, ಸೈಯದ್ ಖಾದಿರ್, ಮಾದೇಗೌಡ, ಮೋಹನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net