ನಿವೃತ್ತ ಶಿಕ್ಷಕ ಶಶಿಧರ್‌ಗೆ ಬೀಳ್ಕೊಡುಗೆ

IMG-20250709-WA0007
Published on

ಅರಸೀಕೆರೆ ಗ್ರಾಮಾಂತರ: ನಾವು ಕಲಿತ ವಿದ್ಯೆ, ಗಳಿಸಿದ ಸಂಪತ್ತು ಮತ್ತೊಬ್ಬರ ಬದುಕಿಗೆ ಬೆಳಕಾದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಪ್ರಾಂಶುಪಾಲ ಡಾ.ಬಸವರಾಜು ಹೇಳಿದರು.

ತಾಲೂಕಿನ ಹರಿಹರಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 24 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಎಚ್.ಶಶಿಧರ್ ಅವರಿಗೆ ಶಾಲಾ ಆಡಳಿತ ಮಂಡಳಿ, ಗ್ರಾಮಸ್ಥರು ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಶಿಧರ್ ಅವರು ಬೋಧನೆಯ ಜತೆಗೆ ಸಾಮಾಜಿಕ ಕಳಕಳಿಯ ಚಿಂತನೆಯನ್ನು ಮಕ್ಕಳಲ್ಲಿ ಬೆಳೆಸಲು ಸದಾ ಮುಂದಿರುತ್ತಿದ್ದರು. ಗ್ರಾಮಸ್ಥರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು ಎಂದು ಸ್ಮರಿಸಿದರು.

ಇದೇ ವೇಳೆ ಶಿಕ್ಷಕ ಶಶಿಧರ್ ದಂಪತಿಯನ್ನು ಸನ್ಮಾನಿಸಲಾಯಿತು. ವೆಂಕಟೇಶ್, ಉಮಾಕಾಂತ್, ಬಸವರಾಜು, ಹರೀಶ್, ಗ್ರಾಮಸ್ಥರು, ಶಿಕ್ಷರಕು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net