ನಿವೃತ್ತ ಶಿಕ್ಷಕನಿಗೆ ಬೀಳ್ಕೊಡುಗೆ

31ss1viswanth ge sendup
Published on

ಶನಿವಾರಸಂತೆ: ಸುದೀರ್ಘ 35 ವರ್ಷ 5 ತಿಂಗಳ ಕಾಲ ವಿವಿಧ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವನಾಥ್ ಅವರು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ಸ್ಥಳೀಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಶನಿವಾರಸಂತೆ ಕ್ಲಸ್ಟರ್ ಮತ್ತು ಶಾಲೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಶನಿವಾರಸಂತೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್, ಗ್ರಾಪಂ ಸದಸ್ಯ ಶರತ್‌ಶೇಖರ್, ಎಸ್‌ಡಿಎಂಸಿ ಅಧ್ಯಕ್ಷ ಶರತ್, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜೆಸಿಂತಾ ಶಿಖರ, ಪಾಲಕ ರವಿ, ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net