ನಿವೃತ್ತ ಸಹಾಯಕ ನಿರ್ದೇಶಕರಿಗೆ ಬೀಳ್ಕೊಡುಗೆ

6 ckm 1
ಚಿಕ್ಕಮಗಳೂರಿನ ಜಿಲ್ಲಾ ಮತ್ತು ತಾಲೂಕು ಕೃಷಿ ಪರಿಕರಗಳ ಮಾರಾಟಗಾರರ ಸಂಘ ಆವರಣದಲ್ಲಿ ನಿವೃತ್ತ ಕೃಷಿ ಸಹಾಯಕ ನಿರ್ದೇಶಕಿ ಸುಜಾತ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸುಜಾತ ಮಾತನಾಡಿದರು. ಯೋಗೀಶ್‌, ತಿಮ್ಮಯ್ಯ, ಮನು, ವಿಕ್ರಂ, ಗೌತಮ್‌ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸುಜಾತ ಅವರು ನಿವೃತ್ತಿ ಹೊಂದಿದ್ದು, ಅವರಿಗೆ ಚಿಕ್ಕಮಗಳೂರು ಜಿಲ್ಲಾ ಮತ್ತು ತಾಲೂಕು ಕೃಷಿ ಪರಿಕರಗಳ ಮಾರಾಟಗಾರರ ಸಂಘದಿಂದ ಸನ್ಮಾನಿಸಿ ಗೌರವಯುತವಾಗಿ ಬೀಳ್ಕೊಡಲಾಯಿತು.

ಚಿಕ್ಕಮಗಳೂರು ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷ ಯೋಗೀಶ ಮಾತನಾಡಿ, ಸುಜಾತ ಅವರು ತಮ್ಮ ಅಧಿಕಾರಾವಧಿಯಲ್ಲಿ ಅನೇಕ ರೈತ ಪರ ಕೆಲಸವನ್ನ ಮಾಡಿದ್ದಾರೆ. ಸದಾ ನಗುಮುಖದಿಂದ ಎಲ್ಲರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಿದ್ದರು. ಅವರು ನಿವೃತ್ತಿ ಹೊಂದುತ್ತಿರುವುದು ಬೇಸರದ ಸಂಗತಿ, ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಸುಜಾತ ಅವರು ಮಾತನಾಡಿ, ನಾನು ಸರ್ಕಾರದ ಪ್ರಕಾರವಾಗಿ ನಿವೃತ್ತಿ ಹೊಂದುತ್ತಿದ್ದೇನೆ. ಆದರೆ ಸದಾ ನಿಮ್ಮೊಂದಿಗಿದ್ದು ಮಾರ್ಗದರ್ಶನ ನೀಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ತಿಮ್ಮಯ್ಯ, ಕಾರ್ಯದರ್ಶಿ ಮನು, ಉದಯ, ವಿಕ್ರಂ, ಗೌತಮ್, ಶಂಕರಮೂರ್ತಿ, ಶ್ರೀಕಾಂತ್ ಶೆಟ್ಟಿ, ಸುಜಾತ ಅವರ ಪತಿ ಓಂಕಾರ ಮೂರ್ತಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net