ನಿವೇಶನ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Slum
Published on

ಚಿತ್ರದುರ್ಗ: ನಗರ ವ್ಯಾಪ್ತಿಯ ನಿವೇಶನ ರಹಿತ 400ಕ್ಕೂ ಅಧಿಕ ಕುಟುಂಬಗಳಿಗೆ ಸರ್ಕಾರಿ ಭೂಮಿ ಗುರುತಿಸಿ ಮಂಜೂರಾತಿ ಮಾಡಿಕೊಡಬೇಕು ಎಂದು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಶಾಖೆಯ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಕೊಳಚೆ ಪ್ರದೇಶಗಳಲ್ಲಿ ಎಸ್ಸಿ, ಎಸ್ಟಿ, ಅಲೆಮಾರಿ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದವರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಕಳೆದ 20 ವರ್ಷದಿಂದ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದು, ದುಡಿಯುವ ಹಣದಲ್ಲಿ ಶೇ 50ರಷ್ಟು ಬಾಡಿಗೆಗೆ ವ್ಯಯವಾಗುತ್ತಿದೆ ಎಂದು ಅಳಲು ತೋಡಿಕೊಂಡರು.

ಈ ಕುರಿತು ಅನೇಕ ಬಾರಿ ಪ್ರತಿಭಟನೆ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಕರ್ನಾಟಕ ಭೂ ಮಂಜೂರಾತಿ ನಿಯಮದಡಿ ಸರ್ಕಾರಿ ಭೂಮಿ ಗುರುತಿಸಿ, ನಿವೇಶನ ರಹಿತರಿಗೆ ಮಂಜೂರಾತಿ ಮಾಡಿಕೊಡಲು ಈಗಿನ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

ಶಾಖೆಯ ಅಧ್ಯಕ್ಷ ಮಹೇಶ್, ಪದಾಧಿಕಾರಿಗಳಾದ ಟಿ.ಮಂಜಣ್ಣ, ಎಂ.ವೆಂಕಟೇಶ್, ಮಾಲತಿ, ಭಾಗ್ಯಮ್ಮ, ಮಂಜುನಾಥ, ರೇಷ್ಮಾಬಾನು, ನೇತ್ರಾ, ವರಲಕ್ಷ್ಮಿ, ಹೀನಾಕೌಸರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net