ಕುಣಿಗಲ್: ಖಾಲಿ ನಿವೇಶನದಲ್ಲಿ ಅಕ್ರಮವಾಗಿ ಬೆಳೆದಿದ್ದ 1 ಕೆ.ಜಿ 250 ಗ್ರಾಂ ಗಾಂಜಾವನ್ನು ಕುಣಿಗಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ಸವೋರ್ದಯ ಶಾಲೆಯ ಪಕ್ಕದ ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಪಡೆದ ಕುಣಿಗಲ್ ವೃತ್ತ ನಿರೀಕ ಎಸ್.ಬಿ.ನವೀನ್ ಗೌಡ ಹಾಗೂ ಪೊಲೀಸ್ ಸಿಬ್ಬಂದಿ ಗಾಜಾವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ, ಗಾಂಜಾ ಬೆಳೆದ ಆರೋಪಿ ಯಾರೆಂದು ಪತ್ತೆಯಾಗಿಲ್ಲ. ತನಿಖೆ ಮುಂದುವರಿದಿದೆ.