ನಿಷೇಧಾಜ್ಞೆ ಜಾರಿ 27ರಂದು

CTD DC T. venktesh--0006
Published on

ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಗರದಲ್ಲಿ ಆ.27ರಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ನಗರದ 24 ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಇಂಟರ್‌ನೆಟ್ ಕೇಂದ್ರಗಳನ್ನು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಮುಚ್ಚುವಂತೆ, ಕೇಂದ್ರಗಳಿಗೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಡಿಸಿ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net