

ಹಾಸನ: ಕಳೆದ 30-40 ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿರುವ ನಿಷ್ಟಾವಂತ ಕಾರ್ಯಕರ್ತರಿಗೆ ನಿಗಮ ಮಂಡಳಿ ಸ್ಥಾನಮಾನ ನೀಡಲು ಹೈ ಕಮಾಂಡ್ ಬಳಿ ಮನವಿ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿನಯ್ ಗಾಂಧಿ ಹೇಳಿದರು.
ಪಕ್ಷಕ್ಕೆ ನಿಷ್ಟಾವಂತರಾಗಿ ಕೆಲಸ ಮಾಡುತ್ತಿರುವ ಅನೇಕ ಕಾರ್ಯಕರ್ತರು ಅವಕಾಶ ವಂಚಿತರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರ ನಿಯೋಗ ವರಿಷ್ಠರಿನ್ನು ಬೇಟಿ ಮಾಡಿ ಮನವರಿಕೆ ಮಾಡಿದ್ದು, ಈಗಾಲೇ ವಿಧಾನಸಭಾ ಚುನಾವಣೆಯಲ್ಲಿ ಪರಜಿತರಾಗಿರುವ ಅಥವಾ, ಈ ಹಿಂದೆ ಶಾಸಕರಾಗಿರುವ ಅಭ್ಯರ್ಥಿಗಳನ್ನು ಯಾವುದೇ ನಿಗಮ ಮಂಡಳಿಗೆ ಪರಿಗಣಿಸಬಾರದು ಇದರಿಂದ ಇತರ ಕಾರ್ಯಕರ್ತರಿಗೆ ಅವಕಾಶಗಳು ಸಿಗುವುದಿಲ್ಲ ಎಂದು ಮನವಿ ಮಾಡಲಾಗಿದೆ ಇದಕ್ಕೆ ಒಪ್ಪಿಗೆ ಕೂಡ ಸೂಚಿಸಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪಕ್ಷಕ್ಕಾಗಿ ದುಡಿಯುವ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವ ಸಲುವಾಗಿ ಏನೇನು ಮಾಡಬೇಕು ಎಲ್ಲವನ್ನೂ ಮಾಡುವುದಾಗಿ ಭರವಸೆ ನೀಡಿದ್ದಾರೆ, ಜೊತೆಗೆ ಈ ಭಾರಿ ಕರ್ನಾಟಕದಲ್ಲಿ ಅಧಿಕ ಎಂಪಿ ಸ್ಥಾನ ಗೆಲ್ಲಲು ಶ್ರಮ ವಹಿಸಿದ ಕಾರ್ಯಕರ್ತರ ಪಟ್ಟಿ ತಯಾರಿಸಿ ಕೊಡಲು ಕೆಪಿಸಿಸಿ ಅಧ್ಯಕ್ಷರಿಗೆ ಸೂಚನೆ ನೀಡಿದ್ದು, ನಮ್ಮ ಮನವಿಗೆ ಪೂರಕವಾಗಿ ಸ್ಪಂದಿಸಿದ್ದು ನಮಗೆ ಸಂತಸ ತಂದಿದೆ ಎಂದರು
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮುನಿಸ್ವಾಮಿ, ಜಾಜ್ ವಿಲ್ಸನ್, ಸುರೇಶ್, ಮೊಹಮ್ಮದ್ ಅಲೀಮ್ ಇತರರು ಇದ್ದರು.