ನೀರಾವರಿ ಕ್ಷೇತ್ರಕ್ಕೆ ವಿಶ್ವೇಶ್ವರಯ್ಯ ಕೊಡುಗೆ ಅಪಾರ

22ydg06
Published on


ಯಾದಗಿರಿ: ದೇಶದ ಕೈಗಾರಿಕೆ ಹಾಗೂ ನೀರಾವರಿ ಕ್ಷೇತ್ರಗಳಲ್ಲಿ ರಾಜ್ಯಕ್ಕೆ ಸರ್.ಎಂ.ವಿಶ್ವೇಶ್ವರಯ್ಯನವರ ಕೊಡುಗೆ ಬಹು ದೊಡ್ಡದಿದೆ. ರಾಜ್ಯದ ಕೃಷರಾಜ ಸಾಗರ ಅಣೆಕಟ್ಟನ್ನು ಕಟ್ಟಿದ ಕೀತರ್ಿ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

ಶಹಾಪುರ ಸಮೀಪದ ಭೀಮರಾಯನ ಗುಡಿಯ ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕೆಬಿಜೆಎನ್ನೆಲ್ನಿಂದ ಆಯೋಜಿಸಿದ್ದ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂಜಿನಿಯರ್ ಕಾಲೇಜುಗಳು, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಭದ್ರಾವತಿ ಉಕ್ಕಿನ ಕಾಖರ್ಾನೆ ಹೀಗೆ ನೂರಾರು ಕೈಗಾರಿಕೆಗಳನ್ನು ಆರಂಭಿಸುವ ಮೂಲಕ ದೇಶದ ಅಭಿವೃದ್ಧಿಗೆ ಶ್ರೀಕಾರ ಹಾಕಿದ್ದಾರೆ ಎಂದು ಬಣ್ಣಿಸಿದರು.
1964ರಲ್ಲಿ ಲಾಲ್ಬಹದೂರ್ ಶಾಸ್ತ್ರೀ ಪ್ರಧಾನಿಯಾಗಿದ್ದಾಗ ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಡಿಗಲ್ಲು ಹಾಕಿದರು. 1970-80ರಲ್ಲಿ ಆಲಮಟ್ಟಿ ಅಣೆಕಟ್ಟು

ನಿಮರ್ಿಸಲಾಯಿತು. ಏಷ್ಯಾದಲ್ಲಿಯೇ ಅತಿದೊಡ್ಡ ನೀರಾವರಿ ಕ್ಷೇತ್ರ ಕೃಷ್ಣ ಮೇಲ್ದಂಡೆ ಯೋಜನೆಯಾಗಿದೆ ಎಂದರು.
ಅಧೀಕ್ಷಕ ಇಂಜಿನಿಯರ್ ಆರ್.ಸತೀಶ್, ಪ್ರಮಖರಾದ ಚನ್ನಪ್ಪ ಆನೆಗುಂದಿ. ದೇವು ಇದ್ದರು.ಸತ್ಯನಾರಾಯಣ ಸ್ವಾಗತಿಸಿದರು. ಮಹೇಶ್ ಪತ್ತಾರ್ ಪ್ರಾಥರ್ಿಸಿದರು..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net