

ಬೀದರ್: ಕಾಂಗ್ರೆಸ್ ಸರ್ಕಾರದಲ್ಲಿ ನೀರಾವರಿ ಯೋಜನೆಗಳಿಗೆ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಸಂಜೀವಕುಮಾರ ಪಾಟೀಲ್ ಜ್ಯಾಂತಿ ದೂರಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ನೀರಾವರಿ ಯೋಜನೆಗಳಿಗೆ 23 ಸಾವಿರ ಕೋಟಿ ರೂ. ಅನುದಾನ ಒದಗಿಸಿದ್ದು, ಅದನ್ನು ಇದೀಗ 19 ಸಾವಿರ ಕೋಟಿ ರೂ.ಗೆ ಇಳಿಸಲಾಗಿದೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಮಾಡಿದ ಪಾದಯಾತ್ರೆ ಕೇವಲ ರಾಜಕೀಯ ಸ್ಟಂಟ್ ಎಂಬುವುದನ್ನು ನಿರೂಪಿಸಿದೆ ಎಂದು ಆರೋಪಿಸಿದ್ದಾರೆ.
ವಿದ್ಯುತ್ ದರ ದಿಢೀರ್ ಹೆಚ್ಚಳದಿಂದ ಜನರಿಗೆ ಆರ್ಥಿಕ ಹೊರೆಯಾಗಿದೆ. ಕೈಗಾರಿಕೆಗಳಿಗೆ ಬಹಳಷ್ಟು ಹೊಡೆತಯಾಗಿದೆ. ಗೃಹ ಬಳಕೆಯ ಪ್ರತಿ ಯುನಿಟ್ ಹೆ ಸರಾಸರಿ 70 ಪೈಸೆ ಹೆಚ್ಚಳ ಹಾಗೂ ಮಿನಿಮಮ್ ಚಾಜ್೯ 60ರಿಂದ 70 ರೂ. ಹೆಚ್ಚಳ ಮಾಡಲಾಗಿದೆ. ಈ ರೀತಿ ಬೇಕಾಬಿಟ್ಟಿ ದರ ಏರಿಕೆ ಮಾಡುವ ಮೂಲಕ ಗೃಹ ಬಳಕೆದಾರರಿಗೆ, ಸಣ್ಣ ಉದ್ಯಮದಾರರಿಗೆ ಪೆಟ್ಟಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.