ನೀರಾವರಿ ಸೌಲಭ್ಯ ವಿಸ್ತರಿಸಲು ಕ್ರಮ

25blk2
ಭಾಲ್ಕಿಯ ರೈತ ಹೊಲದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಗಂಗಾಕಲ್ಯಾಣ ಯೋಜನೆಯಡಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕೊಳವೆ ಬಾವಿ ಕೊರೆಯುವ ಕಾರ್ಯಕ್ಕೆ ಚಾಲನೆ ನೀಡಿದರು. ಪುರಸಭೆ ಅಧ್ಯಕ್ಷೆ ಶಶಿಕಲಾ ಅಶೋಕ, ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ಬಸವರಾಜ ವಂಕೆ, ಚಂದ್ರಶೇಖರ ವಂಕೆ, ಕುಪೇಂದ್ರ ವಂಕೆ ಇತರರಿದ್ದರು.
Published on

ಭಾಲ್ಕಿ: ಕ್ಷೇತ್ರದಲ್ಲಿ ನೀರಾವರಿ ಸೌಲಭ್ಯ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ರೈತರೊಬ್ಬರ ಹೊಲದಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ೨೦೪-೨೫ನೆಯ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸುವ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನಲ್ಲಿ ಸರಕಾರದ ವಿವಿಧ ಯೋಜನೆಯಡಿ ಕೋಟ್ಯಾಂತರ ರೂ ಅನುದಾನದಲ್ಲಿ ಕಾಲುವೆ ಆಧುನೀಕರಣ, ಕೆರೆ, ಬಾಂದಾರ, ಬ್ರಿಜ್‌-ಕಂ ಬ್ಯಾರೇಜ್ ನಿರ್ಮಿಸಿ ಮಳೆಯಾಶ್ರಿತ ಭೂಮಿಯನ್ನು ನೀರಾವರಿ ಪ್ರದೇಶವನ್ನಾಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ರೈತರು ನೀರಾವರಿ ಸೌಲಭ್ಯ ಸದ್ಬಳಕೆ ಮಾಡಿಕೊಂಡು ವರ್ಷದಲ್ಲಿ ಮೂರ‍್ನಾಲ್ಕು ಬೆಳೆಗಳನ್ನು ಬೆಳೆದು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದರು.

ಸರ್ಕಾರದ ವಿವಿಧ ಗಂಗಾಕಲ್ಯಾಣ ಯೋಜನೆಯಡಿ ಅರ್ಹ ರೈತರನ್ನು ಆಯ್ಕೆ ಮಾಡಿ ಬೋರವೆಲ್ ಕೊರೆಸಿ ಕೊಡಲಾಗುತ್ತಿದೆ. ರೈತರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು ಎಂದರು.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಡಿ ತಾಲೂಕಿಗೆ ಹೆಚ್ಚುವರಿಯಾಗಿ ೪೬ ಕೊಳವೆ ಬಾವಿ ಮಂಜೂರು ಮಾಡಿಸಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕೊಳವೆ ಬಾವಿ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು.

ಪುರಸಭೆ ಅಧ್ಯಕ್ಷೆ ಶಶಿಕಲಾ ಅಶೋಕ, ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ಮಾಜಿ ಅಧ್ಯಕ್ಷ ಬಸವರಾಜ ವಂಕೆ, ಪ್ರಮುಖರಾದ ಚಂದ್ರಶೇಖರ ವಂಕೆ, ಕುಪೇಂದ್ರ ವಂಕೆ, ಅಶೋಕ ವಂಕೆ, ರಾಜಕುಮಾರ ಬೆಲ್ಲಾಳೆ, ಸತೀಶ ಬಾಮ್ನೆ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅರುಣ ಹಡಗಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net