

ಕಲಬುರಗಿ: ಕುಡಿಯುವ ನೀರು ಪೂರೈಕೆ ನಮ್ಮ ಆದ್ಯತೆ ಆಗಿರಬೇಕು. ವಿಳಂಬ ಧೋರಣೆ ಸಹಿಸಲ್ಲ. ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳ ಮತ್ತು ಸರ‍್ವಜನಿಕರ ಕರೆಗಳಿಗೆ ಸ್ಪಂದಿಸದಿದ್ದರೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ರ‍್ಖಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು, ಬಿಸಿಗಾಳಿ ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಬಗ್ಗೆ ಜಾಗೃತಿ ಕುರಿತು ಜಿಲ್ಲಾ ವಿಪತ್ತು ನರ‍್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿ, ಕುಡಿಯುವ ನೀರಿನ ಬಗ್ಗೆ ಆಯಾ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯುವ ಟಾಸ್ಕ್ ಫರ‍್ಸ್ ಸಭೆಯ ನಡಾವಳಿ ಅನುಮೋದನೆ ಪಡೆದು ಕೂಡಲೇ ಕರ‍್ಯಪ್ರವೃತ್ತರಾಗಬೇಕು ಎಂದರು.
ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ೧ ಟಿಎಂಸಿ ನೀರು ಬಿಡುಗಡೆಗೆ ಮುಖ್ಯಮಂತ್ರಿ ಸಿದ್ದದ್ರಾಮಯ್ಯ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ನೀರು ಬಿಡುಗಡೆ ಭರವಸೆ ಇದೆ. ಕಲಬುರಗಿ ನಗರದಲ್ಲಿ ನೀರಿನ ಸಮಸ್ಯೆ ತಲೆದೋರಿದಲ್ಲಿ ಟ್ಯಾಂಕರ್ ಮೂಲಕ ಪೂರೈಸಬೇಕು ಎಂದು ಪಾಲಿಕೆ ಆಯುಕ್ತ ಅವಿನಾಶ ಶಿಂಧೆಗೆ ಸೂಚಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ವಾರಕ್ಕೊಮ್ಮೆ ನೀರು ಬರುತ್ತಿದೆ. ಸರಬರಾಜಾಗುವ ನೀರು ಮಲೀನವಾಗಿರುತ್ತದೆ. ಈ ಬಗ್ಗೆ ಹೈಕರ‍್ಟ್ ನ್ಯಾಯಮರ‍್ತಿಗಳು ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ ಎಂದು ಶಾಸಕ ಬಿ.ಆರ್.ಪಾಟೀಲ್ ಸಭೆಯ ಗಮನಕ್ಕೆ ತಂದರು. ಶ್ರೀ ಪರಿಹರಿಸಲಾಗುವುದು ಎಂದು ಅಧಿಕಾರಿಗಳು ಉತ್ತರಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ಸಿಂಗ್ ಮೀನಾ ಮಾತನಾಡಿ, ಜಿಲ್ಲೆಯಲ್ಲಿ ೧೫ ಗ್ರಾಮ ಪಂಚಾಯಿತಿ ೧೮ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ೧೭ರಲ್ಲಿ ಖಾಸಗಿ ಬೋರವೆಲ್ ಮೂಲಕ, ಒಂದು ಹಳ್ಳಿಯಲ್ಲಿ ಟ್ಯಾಂಕರ್ ನೀರು ಪೂರೈಸಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ೨೯೫ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗಲಿದೆ. ೭೮೭ ಬೋರವೆಲ್ ಚಾಲ್ತಿಯಲ್ಲಿದ್ದು, ೩೬೩ ಬೋರವೆಲ್ ಫ್ಲಷ್ ಮಾಡಿದರೆ ನೀರು ಸಿಗಲಿದೆ. ೩೪೫ ಖಾಸಗಿ ಬೋರವೆಲ್ ಬಾಡಿಗೆಗೆ ಸಿದ್ಧತೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನರ‍್ದೇಶಕ ಮುನಾವರ್ ದೌಲಾ ಮಾತನಾಡಿ, ೧೨ ಪೌರ ಸಂಸ್ಥೆಗಳ ೨೨೮ ವರ್ಡ್ಗಳಿದ್ದು, ಯಡ್ರಾಮಿ ಪಟ್ಟಣ ಹೊರತುಪಡಿಸಿ ಬೇರೆಡೆ ಸಮಸ್ಯೆ ಇಲ್ಲ. ಆಳಂದ, ಅಫಜಲಪುರಕ್ಕೆ ಪಟ್ಟಣಕ್ಕೆ ನೀರು ಪೂರೈಸಲು ನೀರು ಸಂಗ್ರಹ ಇದೆ ಎಂದರು.
ಬಿಸಿಲಿನ ರಣೆ, ಏ.೧೬ರಂದು ನಡೆಯಲಿರುವ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಶಾಸಕರಾದ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತಿಮಾ, ಎಂ.ವೈ.ಪಾಟೀಲ್, ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ್, ಚಂದ್ರಶೇಖರ ಪಾಟೀಲ್, ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ, ಕೂಡಾ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಇದ್ದರು.