ನೀರು ಪೂರೈಕೆಗೆ ಕ್ರಮವಹಿಸಿ

4
ಕಿತ್ತೂರು ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿದರು. ಸುಭಾಷ ಸಂಪಗಾಂವಿ ಇದ್ದರು.
Published on

ಚನ್ನಮ್ಮನ ಕಿತ್ತೂರು: ಬರ ಆವರಿಸಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಾಪಂ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಸಾರ್ವಜನಿಕರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಜನರಿಗೆ ಮನರೇಗಾ ಅಡಿಯಲ್ಲಿ ಕೆಲಸ ನೀಡಬೇಕು. ಸರಿಯಾಗಿ ನೀರು ಪೂರೈಸಬೇಕು ಎಂದರು. ತಾಪಂ ಇಒ ಸುಭಾಷ ಸಂಪಗಾಂವಿ ಮಾತನಾಡಿ, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿ ಪರಿಹರಿಸಬೇಕು ಎಂದು ಸೂಚಿಸಿದರು.

ಅಭಿಯಂತ ಕಿರಣ ಗೋರ್ಪಡೆ, ತಾಪಂ ಸಹಾಯಕ ನಿರ್ದೇಶಕರಾದ ಸುರೇಶ ನಾಗೋಜಿ, ವಿಜಯ ಪಾಟೀಲ, ಲಿಂಗರಾಜ ಹಲಕರ್ಣಿಮಠ, ಪಿಡಿಒಗಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net