

ಬಾಗಲಕೋಟೆ: ಬಾದಾಮಿ ತಾಲೂಕಿನ ತೋಗುಣಶಿ ಗ್ರಾಮದಲ್ಲಿ ನಡೆಯುತ್ತಿರುವ ನೀರು ಶುದ್ದೀಕರಣ ಘಟಕ ಕಾಮಗಾರಿ ಸ್ಥಳಕ್ಕೆ ಬುಧವಾರ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳೀಯ ಅಽಕಾರಿಗಳು, ಅಭಿಯಂತರರು ಮತ್ತು ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸಿ ಕಾಮಗಾರಿ ಗುಣಮಟ್ಟ ಹಾಗೂ ನಿಗದಿತ ಅವಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಗ್ರಾಮೀಣ ಪ್ರದೇಶಗಳಿಗೆ ಶುದ್ದ ಕುಡಿಯುವ ನೀರನ್ನು ಒದಗಿಸಲು ಈ ಘಟಕ ಬಹಳ ಮುಖ್ಯವಾಗಿದೆ ಎಂದರು ತಿಳಿಸಿದರು. ನಂತರ ಆಡಗಲ್ಲ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು. ಗ್ರಾಮೀಣ ಆಡಳಿತ ವ್ಯವಸ್ಥೆಗಳ ಕಾರ್ಯಕ್ಷಮತೆ, ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಮತ್ತು ಸಾರ್ವಜನಿಕ ಸೇವೆಗಳ ಲಭ್ಯತೆಗಳನ್ನು ಪರಿಶೀಲಿಸಿದರು.
ಬೇಲೂರು ಗ್ರಾಮದಲ್ಲಿರುವ ಇಂಟೆಕ್ ಜಾಕ್‌ವೆಲ್ ತಾಣಕ್ಕೆ ಭೇಟಿ ನೀಡಿದ ಸಿಇಒ ಅವರು ನೀರು ಸಂಗ್ರಹ ಮತ್ತು ವಿತರಣೆ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಸದ್ಯದ ಸ್ಥಿತಿಗತಿಗಳು, ಕಾರ್ಯಪದ್ದತಿ ಮತ್ತು ಭವಿಷ್ಯದ ಅಗತ್ಯತೆಗಳ ಬಗ್ಗೆ ಸಮೀಕ್ಷೆ ಮಾಡಿದರು. ಇತ್ತೀಚಿನ ಜನಸಂಖ್ಯಾ ಬೆಳೆವಣಿಗೆ ಅನುಗುಣವಾಗಿ ನೀರು ಪೂರೈಕೆ ವ್ಯವಸ್ಥೆಯನ್ನು ಸುಧಾರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಽಸಿದ ಅಽಕಾರಿಗಳಿಗೆ ಸೂಚನೆ ನೀಡಿದರು.
ಭೇಟಿ ಸಮಯದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಆಕಾಶ ವಂದೆ, ಬಾದಾಮಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆರ್.ಎಸ್.ಬಂಡಿ ಸೇರಿದಂತೆ ಇತರೆ ಅಽಕಾರಿಗಳು ಉಪಸ್ಥಿತರಿದ್ದರು.