ನೀರು ಸಂಗ್ರಹಾರಕಗಳನ್ನು ಸ್ವಚ್ಚಗೊಳಿಸಿ

06 YERRISWAMY 03
Published on

ಬಳ್ಳಾರಿ : ಜಿಲ್ಲೆಯ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿನ ನೀರು ಸಂಗ್ರಹಾರಕಗಳನ್ನು ಸ್ವಚ್ಚಗೊಳಿಸಬೇಕು. ಡೆಂೆ ಹರಡದಂತೆ ಎಚ್ಚರವಹಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಗಿರಿಜಾ ಶಂಕರ ಹೇಳಿದರು.
ಇಲ್ಲಿನ ಬಂಡಿಹಟ್ಟಿ ಬಡಾವಣೆಯಲ್ಲಿನ ಮನೆ, ಶಾಲೆ ಹಾಗೂ ಅಂಗನವಾಡಿಗಳಿಗೆ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಿರ್ಮೂಲನಾ ದಿನದ ಅಂಗವಾಗಿ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾದ ಸಮೀಕ್ಷೆ ಹಿನ್ನಲೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. ಇತ್ತೀಚೆಗೆ ಎಲ್ಲಡೆ ಡೆಂೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಜಿಲ್ಲೆಯಲ್ಲಿ ರೋಗ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಅಂತರ ಇಲಾಖೆಗಳ ಸಮನ್ವಯೊಂದಿಗೆ ಸಾರ್ವಜನಿಕರಿಗೆ ಜಾಗೃತಿ ನೀಡಲಾಗುತ್ತಿದೆ. ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಮಾಡಲು ಬಳಕೆಗಾಗಿ ನೀರು ತುಂಬುವ ಪರಿಕರಗಳನ್ನು ಸ್ವಚ್ಛಗೊಳಿಸಬೇಕು ಮತ್ತು ತಪ್ಪದೇ ಮುಚ್ಚಳ ಮುಚ್ಚಬೇಕು. ಬಟ್ಟೆಯನ್ನು ಕಟ್ಟುವ ಮೂಲಕ ರೋಗ ತಡೆಗೆ ಸೊಳ್ಳೆಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ನೀಡಬೇಕು ಎಂದು ಹೇಳಿದರು.
ಡಿಎಚ್‌ಒ ಡಾ.ವೈ.ರಮೇಶಬಾಬು ಮಾತನಾಡಿ, ಡೆಂೆಗೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಲಕ್ಷಣಗಳಾಧರಿಸಿ ಚಿಕಿತ್ಸೆ ನೀಡಲಾಗುವುದು. ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧ ದಾಸ್ತಾನು ಲಭ್ಯವಿದೆ. ಸಾರ್ವಜನಿಕರು ಮನೆಯಲ್ಲಿ ಯಾರಿಗಾದರೂ ಜ್ವರ ಕಂಡು ಬಂದಲ್ಲಿ ಕೂಡಲೇ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದರು.
ಈ ವೇಳೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್ ದಾಸಪ್ಪನವರ, ಜಿಪಂ ಅಧಿಕಾರಿ ಚಂದ್ರಶೇಖರ ಹಿರೇಮಠ, ಎನ್‌ವಿಬಿಡಿಸಿ ಜಿಲ್ಲಾ ಸಲಹೆಗಾರ ಪ್ರತಾಪ್, ಮುಖ್ಯ ಗುರುಗಳು ವಿರುಪಾಕ್ಷಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net