ನುಡಿದಂತೆ ನಡೆಯುವ ಸರ್ಕಾರ

11M.D.R.1
ಮದ್ದೂರಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ನರಸಿಂಹಮೂರ್ತಿ, ಅಶೋಕ್, ಕುಮಾರ್, ಸಿದ್ದರಾಜು, ಸಚಿನ್, ಕದಲೂರು ರಾಮಕೃಷ್ಣ ಇತರರು ಇದ್ದರು.
Published on

ಮದ್ದೂರು: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳಲಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಭಾನುವಾರ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ಅನುಕೂಲವಾಗಲಿದೆ. ಸರ್ಕಾರದ ಉಳಿದ ಯೋಜನೆಗಳನ್ನು ಶೀಘ್ರ ಅನುಷ್ಠಾನಕ್ಕೆ ತರಲಿದೆ ಎಂದರು.
ಶಕ್ತಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಸರ್ಕಾರ ಇಂದು ಹೊಸ ಇತಿಹಾಸಕ್ಕೆ ಮುನ್ನುಡಿ ಬರೆಯುತ್ತಿದೆ. ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿಗೆ ಇದು ಸಾಕ್ಷಿಯಾಗಿದೆ ಎಂದರು.
ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಊಹಾಪೋಹ ಸೃಷ್ಟಿ ಮಾಡುತ್ತಿವೆ. ಜನರು ಅವುಗಳಿಗೆ ಕಿವಿಗೊಡಬಾರದು ಎಂದರು. ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ, ಡಿಪೋ ಮ್ಯಾನೇಜರ್ ಕುಮಾರ್, ಪುರಸಭಾ ಮುಖ್ಯಾಧಿಕಾರಿ ಅಶೋಕ್, ಸದಸ್ಯರಾದ ಸಚಿನ್, ಸಿದ್ದರಾಜು, ಸಿಪಿಐ ಸಂತೋಷ್, ಸಂಚಾರ ಪಿಎಸ್‌ಐ ಅಯ್ಯನ್‌ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಪುರಸಭಾ ಮಾಜಿ ಅಧ್ಯಕ್ಷ ಎಂ.ಸಿ.ಬಸವರಾಜು, ಕಿಸಾನ್ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್. ಮೋಹನ್ ಕುಮಾರ್, ಮಖಂಡರಾದ ಗೊರವನಹಳ್ಳಿ ಮಧು, ಎಂ.ಡಿ.ಮಹಾಲಿಂಗಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net