ನುಲಿಯ ಚಂದಯ್ಯ ಜಯಂತಿ 31ರಂದು

w
Published on

ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆ. 31ರಂದು ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿರುವರು. ಕರ್ನಾಟಕ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ ವಿಶೇಷ ಅತಿಥಿಯಾಗಿ ಆಗಮಿಸುವರು. ಅತಿಥಿಗಳಾಗಿ ಶಾಸಕರಾದ ಜಗದೀಶ ಶೆಟ್ಟರ್, ವಿನಯ ಕುಲಕರ್ಣಿ, ಅಬ್ಬಯ್ಯ ಪ್ರಸಾದ, ಎನ್.ಎಚ್. ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಮೇಯರ್ ವೀಣಾ ಭರದ್ವಾಡ, ಕೊರಮ ಸಮಾಜದ ಜಿಲ್ಲಾಧ್ಯಕ್ಷ ನಾರಾಯಣ ಭಜಂತ್ರಿ, ಸಮಾಜದ ಮುಖಂಡರು, ಇತರರು ಭಾಗವಹಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು.
ಹುಬ್ಬಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈ.ಎಂ.ಭಜಂತ್ರಿ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net