ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಹಂಚನಾಳಗೆ ಸನ್ಮಾನ

Bidar BEO Sanman- H.M. Sangh Photo
Published on

ಬೀದರ್: ನೂತನ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ ಹಂಚನಾಳ ಅವರನ್ನು ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಮುಖ್ಯೋಪಾಧ್ಯಾಯರ ಸಮಸ್ಯೆಗಳು ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚೆ ನಡೆಸಲಾಯಿತು. ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲ್ಲೂಕಿನ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಶ್ರಮಿಸಲಿದ್ದಾರೆ ಎಂದು ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಕಪಲಾಪುರೆ ವಿಶ್ವಾಸ ವ್ಯಕ್ತಪಡಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಜೀಬೊದ್ದಿನ್, ಪದಾಧಿಕಾರಿಗಳಾದ ಮಹಮ್ಮದ್ ಫಕ್ರೊದ್ದಿನ್, ಮಖಶೊದ್ದಿನ್, ಶೇಕ್ ಅಹಮ್ಮದ್, ಮಹಮ್ಮದ್ ಇಸಾಕ್, ಪಂಪಾವತಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಸುರೇಶ ಟಾಳೆ, ಸಂಪತಿ, ದೈಹಿಕ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷೆ ಸರಸ್ವತಿ ಕಾಡವಾದ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಅಧ್ಯಕ್ಷ ಪ್ರಕಾಶ ರೆಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net