ನೂತನ ಜಿಲ್ಲಾ ಶಸ್ತ್ರಚಿಕಿತ್ಸರಾಗಿ ಡಾ.ಲೋಕೇಶ್ ನೇಮಕ

ನೂತನ ಜಿಲ್ಲಾ ಶಸ್ತ್ರಚಿಕಿತ್ಸರಾಗಿ ಡಾ.ಲೋಕೇಶ್ ನೇಮಕ
Published on

ಹಾಸನ: ಹಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರನ್ನಾಗಿ ವೈದ್ಯಕೀಯ ಕಾಲೇಜಿನಲ್ಲಿ ಹಲವು ವರ್ಷಗಳಿಂದ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಎಚ್.ಸಿ.ಲೋಕೇಶ್ ಅವರನ್ನು ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.
ಈ ಹಿಂದೆ 5 ವರ್ಷಗಳಿಂದಲೂ ಜಿಲ್ಲಾ ಶಸ್ತ್ರಚಿಕಿತ್ಸರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷ್ಣಮೂರ್ತಿ ಅವರ ಜಾಗಕ್ಕೆ ಡಾ. ಎಚ್.ಸಿ. ಲೋಕೇಶ್ ಅವರನ್ನು ಸರ್ಕಾರ ನಿಯುಕ್ತಿಗೊಳಿಸಿ ಶುಕ್ರವಾರ ಹಿಮ್ಸ್‌ನ ನಿರ್ದೇಶಕ ಡಾ.ಬಿ.ಸಿ. ರವಿಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.
ನಗರದ ಚಿಕ್ಕೇಗೌಡ ಮತ್ತು ಪುಟ್ಟಮ್ಮ ದಂಪತಿಯ ಸಪುತ್ರ ಡಾ. ಲೋಕೇಶ್ ಅವರು ಸರ್ಕಾರಿ ಆಸ್ಪತ್ರೆಯ ವೈದ್ಯರಾದಾಗಿನಿಂದಲೂ ಬಡ ರೋಗಿಗಳ ಪರವಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಇವರು ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸರಾಗಿ ಅಧಿಕಾರ ವಹಿಸಿಕೊಂಡರು.
ಈ ಹಿಂದೆ ಜಿಲ್ಲಾ ಶಸ್ತ್ರಚಿಕಿತ್ಸರಾಗಿ 5 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಕೃಷ್ಣಮೂರ್ತಿ ಅವರು ಮಹಾಮಾರೊ ಕೊರೋನಾ ಸಂದರ್ಭದಲ್ಲಿ ಉತ್ತಮಬಾಗಿ ಕೆಲಸ ಮಾಡಿದ್ದರು.ಇವರು ಪ್ರಸ್ತುತ ಇವರು ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕರಾಗಿ ಮುಂದುವರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net