ನೂತನ ಜಿಲ್ಲಾಧಿಕಾರಿಯಾಗಿ ವೈ.ಎಸ್.ಪಾಟೀಲ ಅಧಿಕಾರ ಸ್ವೀಕಾರ

15TMK_DC_New
Published on

ತುಮಕೂರು: ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ ವೈ.ಎಸ್.ಪಾಟೀಲ ಸೋಮವಾರ ನಿರ್ಗಮಿತ ಡಿಸಿ ಡಾ.ಕೆ.ರಾಕೇಶ್‌ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಹುದ್ದೆಗೆ ವರ್ಗಾವಣೆಗೊಂಡಿರುವ ಡಾ.ಕೆ.ರಾಕೇಶ್‌ಕುಮಾರ್ ಅವರಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಾಖಲೆಗಳನ್ನು ಪಡೆದು ವೈ.ಎಸ್.ಪಾಟೀಲ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ನೂತನ ಜಿಲ್ಲಾಧಿಕಾರಿ ಎಲ್ಲ ಉಪವಿಭಾಗಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯ ಮಾಹಿತಿ ಪಡೆದರು. ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಶ್ರೀಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ವೈ.ಎಸ್.ಪಾಟೀಲ, ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ಶ್ರೀಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು.

ವೈ.ಎಸ್.ಪಾಟೀಲ ತುಮಕೂರು ಜಿಲ್ಲಾಧಿಕಾರಿಯಾಗುವ ಪೂರ್ವದಲ್ಲಿ ಉಪವಿಭಾಗಾಧಿಕಾರಿಯಾಗಿ ವಿಜಯಪುರ ಹಾಗೂ ತಿಪಟೂರು ಉಪವಿಭಾಗ, ಬೆಳಗಾವಿ ಮಹಾನಗರಪಾಲಿಕೆ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಆಯುಕ್ತರಾಗಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ(ಕೆಯುಐಡಿಎಫ್‌ಸಿ)ದ ಪ್ರಧಾನ ವ್ಯವಸ್ಥಾಪಕ, ತೋಟಗಾರಿಕಾ ಇಲಾಖೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ,  ವಿಜಯಪುರ ಜಿಲ್ಲಾಧಿಕಾರಿ, ಭೂಮಾಪನ ಮತ್ತು ಕಂದಾಯ ವ್ಯವಸ್ಥೆ(ಸರ್ವೇ ಸೆಟ್ಲುಮೆಂಟ್) ಆಯುಕ್ತರಾಗಿ ಆಗಿ ಸೇವೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net