ನೂತನ ಶಿಕ್ಷಣ ನೀತಿ ಕೈಬಿಡದಂತೆ ಸರ್ಕಾರಕ್ಕೆ ಆಗ್ರಹ

bkt-26-1
ಬಾಗಲಕೋಟೆ ನಗರದ ವಿದ್ಯಾಗಿರಿಯ ವಿಪ್ರ ಅಭಿವೃದ್ಧಿ ಸಂಘದ ಶ್ರೀರಾಯರ ಮಠದ ಆವರಣದಲ್ಲಿ ಶನಿವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
Published on

ಬಾಗಲಕೋಟೆ: ವಿದ್ಯಾರ್ಥಿಗಳ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುವ ನೂತನ ಶಿಕ್ಷಣ ನೀತಿಯನ್ನು ಕೈಬಿಡದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದರು.

ವಿದ್ಯಾಗಿರಿಯ ವಿಪ್ರ ಅಭಿವೃದ್ಧಿ ಸಂಘದ ಶ್ರೀರಾಯರ ಮಠದ ಆವರಣದಲ್ಲಿ ಶನಿವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೌಶಲಕ್ಕೆ ಒತ್ತು ನೀಡಲಾಗಿದ್ದು, ವಿದ್ಯಾರ್ಥಿಗಳ ಸರ್ವತೋನ್ಮುಖ ಅಭಿವೃದ್ಧಿಗೆ ಆದ್ಯತೆ ಇದೆ. ಅದರಿಂದಾಗಿ ವ್ಯಕ್ತಿತ್ವ ವಿಕಸನಗೊಳ್ಳಲಿದೆ. ರಾಜ್ಯ ಸರ್ಕಾರ ಅಂಥ ನೀತಿಯನ್ನು ಕೈಬಿಡಬಾರದು. ಅದರಲ್ಲಿನ ಯಾವುದಾದರೂ ಅಂಶಗಳ ಬಗ್ಗೆ ಒಪ್ಪಿಗೆ ಇಲ್ಲವಾದರೆ ಅದನ್ನು ಚರ್ಚಿಸಲಿ ಅದರ ಹೊರತಾಗಿ ಇಡೀ ಶಿಕ್ಷಣ ನೀತಿಯನ್ನೇ ತಿರಸ್ಕರಿಸಲಾಗುವುದು. ಅದನ್ನು ರಾಜಕೀಯ ದೃಷ್ಟಿಕೋನದಿಂದ ನೋಡಿದಂತ್ತಾಗುತ್ತದೆ. ಆ ಕೆಲಸವಾಗಬಾರದು ಅದಕ್ಕಾಗಿ ಸರ್ಕಾರಕ್ಕೆ ಕೂಡಲೇ ಪತ್ರ ಬರೆಯುವುದಾಗಿ ತಿಳಿಸಿದರು.

ಬ್ರಾಹ್ಮಣರಿಗೆ ಪೂರಕವಾಗದ ಅನೇಕ ಕಾನೂನುಗಳನ್ನು ಆಳುವ ಸರ್ಕಾರಗಳು ತಂದಾಗಲೂ ವಿರೋಽಸದೆ ಅವುಗಳನ್ನು ಒಪ್ಪಿಕೊಂಡಿದ್ದೇವೆ. ಎಲ್ಲರನ್ನು ಒಳಗೊಳ್ಳುವ ಸ್ವಭಾವ ನಮ್ಮದಾದರೂ ಬ್ರಾಹ್ಮಣರು ಎಂಬ ಕಾರಣಕ್ಕೆ ವಿರೋಧಕ್ಕೆ ಒಳಗಾಗುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು. ಅಮೇರಿಕ ಅಧ್ಯಕ್ಷ ಸ್ಥಾನಕ್ಕೆ ವಿವೇಕ ರಾಮಸ್ವಾಮಿ ಅವರ ಹೆಸರು ಕೇಳಿ ಬಂದಿದೆ. ಇಲ್ಲಿ ನಮ್ಮ ಬಗ್ಗೆ ಅಪಸ್ವರ, ಅಗೌರವದಿಂದ ಮಾತನಾಡಿದರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ರಾಹ್ಮಣರಿಗೆ ಗೌರವ ಸಿಗುತ್ತಿದೆ. ಪರದೇಶದಲ್ಲಿ ಬ್ರಾಹ್ಮಣರು ವಾಸಿಸುತ್ತಿದ್ದರೂ ಇಲ್ಲಿಯ ಆಚಾರಗಳನ್ನು ಬಿಡದಿರುವುದು ತೃಪ್ತಿಕರ ಎಂದರು.

ಶಾಸಕ ಎಚ್.ವೈ.ಮೇಟಿ, ವಿಜಯಪುರ ಅಕ್ಕಮಹಾದೇವಿ ವಿವಿ ವಿಶ್ರಾಂತ ಕುಲಪತಿ ಡಾ.ಮೀನಾ ಚಂದಾವರಕರ, ಮಹಾಸಭೆ ಉಪಾಧ್ಯಕ್ಷ ಎಚ್.ಎನ್.ಹಿರಿಯಣಸ್ವಾಮಿ, ಮಹಾಸಭಾ ತಾಲೂಕಾ ಘಟಕದ ಅಧ್ಯಕ್ಷ ನಾರಾಯಣ ದೇಸಾಯಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ, ಮಹಾಸಭೆ ಕಾರ್ಯದರ್ಶಿ ಸುಧಾಕರ ಬಾಬು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net