ನೂತನ್ ಕಾಲೇಜಿಗೆ ಉತ್ತಮ ಫಲಿತಾಂಶ

Karthik
Published on

ಚಿತ್ರದುರ್ಗ: ತಾಲೂಕಿನ ಸಿದ್ದಾಪುರದ ನೂತನ್ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಅತ್ಯುನ್ನತ ಶ್ರೇಣಿಯಲ್ಲಿ ಇಬ್ಬರು, ಪ್ರಥಮ ಶ್ರೇಣಿಯಲ್ಲಿ 14 ಮಂದಿ, ದ್ವೀತಿಯ ಶ್ರೇಣಿಯಲ್ಲಿ ಒಬ್ಬ ವಿದ್ಯಾರ್ಥಿ ತೇರ್ಗಡೆ ಹೊಂದಿದ್ದಾರೆ. ಜೆ.ಕಾರ್ತಿಕ್ 600ಕ್ಕೆ 515, ಜೆ.ಸಿ.ಸಹನಾ 512 ಅಂಕಗಳಿಸಿ ಕಾಲೇಜಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ನೂತನ್ ಎಜುಕೇಶನ್ ಅಂಡ್ ರೂರಲ್ ಡೆವಲಪ್‌ಮೆಂಟ್ ಸೊಸೈಟಿಯ ಸಂಸ್ಥಾಪಕ ಡಾ.ಜಿ. ರಾಘವೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net