

ಚಿತ್ರದುರ್ಗ: ತಾಲೂಕಿನ ಸಿದ್ಧಾಪುರ ಗ್ರಾಮದ ನೂತನ್ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಶೇ 100ರಷ್ಟು ಫಲಿತಾಂಶ ಲಭಿಸಿದೆ.
ಶಾಲೆಯ ವಿದ್ಯಾರ್ಥಿಗಳ ಪೈಕಿ 3 ಅತ್ಯುನ್ನತ, 21 ಪ್ರಥಮ, 7 ಮಂದಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿ.ಪಿ.ಗೌರವ್ 548, ಎಸ್.ಯುವರಾಜ್, ಸುಹಾಸ್ ಜಿ ರಾವ್ ತಲಾ 530, ಎಲ್.ಎಂ.ತೇಜಸ್ವಿನಿ, ಕೆ.ಚಂದನಾ, ಕೆ.ಎಚ್.ನವೀದ್ ಆಲಿ ತಲಾ 509 ಅಂಕಗಳಿಸಿ ಕ್ರಮವಾಗಿ ಶಾಲೆಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ.
ಪರೀಕ್ಷೆಗೆ ಹಾಜರಾದ 31 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇದರಲ್ಲಿ ಶಾಲೆಯೂ 3 ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡಿದೆ. ವಿದ್ಯಾರ್ಥಿಗಳ ಸಾಧನೆಗೆ ಶ್ರೀ ನೂತನ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಜಿ.ರಾಘವೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.