ನೂರು ಹೊಲಿಗೆ ಯಂತ್ರಗಳ ವಿತರಣೆ 2ರಂದು

hoolige
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಲಿಂಗರಾಜನಗರ ಸಮುದಾಯ ಭವನದಲ್ಲಿ ಮಾರ್ಚ್ 2ರಂದು ಬೆಳಗ್ಗೆ 11 ಗಂಟೆಗೆ ಶಿವಶಿಂಪಿ ಸಮಾಜದ 100 ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಶಿವಶಿಂಪಿ ಸಂಘ (ಹುಬ್ಬಳ್ಳಿ)ದ ಅಧ್ಯಕ್ಷ ಗಂಗಾಧರ ಗಂಜಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ್ಪಿನ ಬೆಟಗೇರಿಯ ಮೂರುಸಾವಿರ ವಿರಕ್ತಮಠದ ಶ್ರೀ ಕುಮಾರ ವೀರಪಾಕ್ಷ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಶಾಸಕ ಪ್ರಸಾದ ಅಬ್ಬಯ್ಯ, ಅರವಿಂದ ಕುಬಸದ, ಜಯಪ್ರಕಾಶ ಟೆಂಗಿನಕಾಯಿ, ಆನಂದ ಕಮತಗಿ, ಶಶಿಧರ ಶೆಟ್ಟರ್ ಪಾಲ್ಗೊಳ್ಳುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಗಂಗಾಧರ ಸಾದರಹಳ್ಳಿ, ಪ್ರಸಾದ ಕರನಂದಿ, ಆರ್.ಜಿ. ಕಮಡೊಳ್ಳಿ, ಸುಮಂಗಲಾ ಮುದಕವಿ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net