ನೂಲಿಯ ಚಂದಯ್ಯ ಜಯಂತಿ ಅದ್ದೂರಿ ಆಚರಣೆ

21ydg02
Published on


ಯಾದಗಿರಿ: ಕಾಯಕಯೋಗಿ ನೂಲಿಯ ಚಂದಯ್ಯ ಜಯಂತ್ಯುತ್ಸವವನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಕಾರಿ ಶರಣಬಸಪ್ಪ ಕೋಟೆಪ್ಪಗೊಳ ತಿಳಿಸಿದರು.

ಸೋಮವಾರ ನಗರದ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಜಯಂತಿ ನಿಮಿತ್ತ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸೆ.07ರಂದು ನೂಲಿಯ ಚಂದಯ್ಯ ಜಯಂತ್ಯುತ್ಸವ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಬೆಳಗ್ಗೆ 11 ಗಂಟೆಗೆ ಆಚರಿಸಲಾಗುವುದು. ಸಂಬಂಸಿದಂತೆ ಅಕಾರಿಗಳಿಗೆ ವಹಿಸಲಾದ ಕೆಲಸ-ಕಾರ್ಯಗಳನ್ನು ಅಚ್ಚುಕಟ್ಟಾಗಿ, ಯಾವುದೇ ಲೋಪ ಆಗದಂತೆ ನಿಭಾಯಿಸಬೇಕು. ಶಿಷ್ಠಾಚಾರದಂತೆ ಅತಿಥಿ,ಗಣ್ಯರನ್ನು, ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿ ಎಲ್ಲ ರೀತಿಯ ಸೌಕರ್ಯ ಒದಗಿಸಬೇಕು ಎಂದರು.

ಅದೇ ರೀತಿ ವೇದಿಕೆ, ಕುಡಿಯುವ ನೀರು, ವಿದ್ಯುತ್, ಅಲಂಕಾರ, ಧ್ವನಿವರ್ಧಕ, ಸ್ವಚ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಎಲ್ಲ ಅಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ತಾಲೂಕು ಮಟ್ಟದಲ್ಲಿ ಶಾಲಾ ಕಾಲೇಜು, ವಿವಿಧ ಕಚೇರಿಗಳಲ್ಲಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಆಯಾ ಸಂಘಟನೆಗಳಿಂದ ಏರ್ಪಡಿಸಲಾಗುವ ಮೆರವಣಿಗೆ, ಮಾರ್ಗದ ಕುರಿತು ಪೂರ್ವಭಾವಿಯಾಗಿ ಸಂಬಂಸಿದ ಇಲಾಖೆಗೆ ತಿಳಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net