ನೂಲಿಯ ಚಂದಯ್ಯ ಭಾವಚಿತ್ರ ಅದ್ದೂರಿ ಮೆರವಣಿಗೆ

5 (6)
ಭಾವಚಿತ್ರಕ್ಕೆ ಶಾಸಕ ಎಚ್.ವೈ.ಮೇಟಿ ಪೂಜೆ ಸಲ್ಲಿಸುವ ಮೂಲಕ ಮೆರವಣಗೆಗೆ ಚಾಲನೆ ನೀಡಿದರು.
Published on

ಬಾಗಲಕೋಟೆ: ನೂಲಿಯ ಚಂದಯ್ಯ ಜಯಂತಿ ಅಂಗವಾಗಿ ಜಿಲ್ಲಾಡಳಿತದ ಆವರಣದಲ್ಲಿ ಅವರ ಭಾವಚಿತ್ರಕ್ಕೆ ಶಾಸಕ ಎಚ್.ವೈ.ಮೇಟಿ ಪೂಜೆ ಸಲ್ಲಿಸುವ ಮೂಲಕ ಮೆರವಣಗೆಗೆ ಚಾಲನೆ ನೀಡಿದರು.

ಮೆರವಣಿಗೆ ಜಿಲ್ಲಾಡಳಿತದಿಂದ ಪ್ರಾರಂಭವಾಗಿ ನಗರದ ನಾನಾ ಕಡೆ ಸಂಚರಿಸಿ ಕೊನೆಗೆ ಡಾ.ಬಿ.ಆರ್.ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ನೂಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net