ನೃತ್ಯ ರೂಪಕ ಪ್ರದರ್ಶನ 9ರಂದು

1e683b35-5ffe-4488-ad6b-16440ae37090
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಶ್ರೀ ಗಣೇಶ ನೃತ್ಯ ಶಾಲೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜು. 9ರಂದು ಸಂಜೆ 6 ಗಂಟೆಗೆ ಇಲ್ಲಿನ ಸೃಜನಾ ರಂಗ ಮಂದಿರದಲ್ಲಿ ತುಳಜಾಭವಾನಿ ಚರಿತೆ ನೃತ್ಯ ರೂಪಕ ಏರ್ಪಡಿಸಲಾಗಿದೆ ಎಂದು ನೃತ್ಯ ನಿರ್ದೇಶಕಿ ರೋಹಿಣಿ ಇಮಾರತಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮೇಯರ್ ಪೂರ್ಣಾ ಪಾಟೀಲ ಸಮಾರಂಭ ಉದ್ಘಾಟಿಸುವರು. ಅತಿಥಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಆಗಮಿಸುವರು. ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಬೆಂಗಳೂರಿನ ಭರತಾಂಜಲಿ ನಾಟ್ಯಶಾಲೆಯ ಸೀತಾ ಗುರುಪ್ರಸಾದ ಸಂಯೋಜನೆ ಮಾಡಿರುವ ತುಳಜಾಭವಾನಿ ಚರಿತೆ ನೃತ್ಯ ರೂಪಕವನ್ನು ವಿದುಷಿ ಭುವನ ಗುರುಪ್ರಸಾದ ಪ್ರಸತುತಪಡಿಸಲಿದ್ದಾರೆ. ದೇವಿಯ ಮಹಿಮೆಯನ್ನು ಸಾರುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಘವೇಂದ್ರ ಇಮಾರತಿ, ಶೋಭಾ ದೇಶಪಾಂಡೆ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net