ನೃಸಿಂಹ ಜಯಂತಿ ಸರಳವಾಗಿ ಆಚರಣೆ

6sirsi4
Published on

ಶಿರಸಿ: ಇಲ್ಲಿನ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಬುಧವಾರ ಶ್ರೀನೃಸಿಂಹ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಶ್ರೀಗಳು ನೃಸಿಂಹ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕರೊನಾ ವಿರುದ್ಧ ಹೋರಾಡುತ್ತಿರುವ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಪ್ರಧಾನಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿಗಳ ಮೊತ್ತದ ಚೆಕ್ ಅನ್ನು ತಹಸೀಲ್ದಾರ್ ಎಂ.ಆರ್. ಕುಲಕರ್ಣಿ ಮೂಲಕ ಹಸ್ತಾಂತರಿಸಿದರು.

ನಂತರ ಕರೊನಾ ತಡೆಯಲು ಹಗಲು ರಾತ್ರಿಯೆನ್ನದೆ ಶ್ರಮಿಸುತ್ತಿರುವ 13 ಆಶಾ ಕಾರ್ಯಕರ್ತೆಯರಿಗೆ ಸಹಾಯಧನದ ಚೆಕ್ ವಿತರಿಸಲಾಯಿತು.</

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net