ನೆಟ್ಟ ಸಸಿ ಪೋಷಿಸಿ ಬೆಳೆಸಿ

ಎಲ್ಲರೂ ಪರಿಸರ ಕಾಳಜಿ ಹೊಂದಲಿ * 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಹಮದ್ ಇಮ್ತಿಯಾಜ್ ಅಹಮದ್ ಹೇಳಿಕೆ ವಿಜಯವಾಣಿ ಸುದ್ದಿಜಾಲ ಜಮಖಂಡಿ ಅರಣ್ಯ ಒಳಗೊಂಡಂತೆ ಪರಿಸರ ಸುಧಾರಿಸುವುದು ಮತ್ತು ಸಂರಕ್ಷಿಸುವುದು ಭಾರತದ ಸಂವಿಧಾನ ಪರಿಚ್ಛೇದ 51-ಎ ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನ ಮೂಲ ಕರ್ತವ್ಯವಾಗಿದೆ ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಹಮದ್ ಇಮ್ತಿಯಾಜ್ ಅಹಮದ್ ಹೇಳಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಆಶ್ರಯದಲ್ಲಿ ನಗರ ಹೊರವಲಯದ ಕಟ್ಟೆಕೆರೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಗಿಡಮರಗಳನ್ನು ಬೆಳೆಸಿ ಅರಣ್ಯ ಸಂರಕ್ಷಿಸುವುದು ತುಂಬ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪರಿಸರವನ್ನು ಕಾಪಾಡುವ ಕಾಳಜಿ ಹೊಂದಬೇಕಾಗಿದೆ ಎಂದರು. ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ರಾಜಶೇಖರ ಎಸ್. ಹರಸೂರ ಮಾತನಾಡಿ, ಪರಿಸರಕ್ಕೆ ಮಾನವ ಬೇಕಾಗಿಲ್ಲ. ಬದಲಾಗಿ ಪರಿಸರ ಮಾನವನಿಗೆ ಬೇಕಾಗಿದೆ. ಪ್ರತಿಯೊಬ್ಬರೂ ಒಂದೊಂದು ಸಸಿ ನೆಟ್ಟು ಪೋಷಿಸಬೇಕಾಗಿದೆ ಎಂದರು. Let's end plastic pollution.
Let's end plastic pollution.
Published on

ಹುನಗುಂದ: ಮನೆಗೊಂದು ಗಿಡ ನೆಟ್ಟು ಅದನ್ನು ಪೋಷಿಸಿ ಬೆಳೆಸಿದಾಗ ಮಾತ್ರ ಸುಂದರ ಪರಿಸರವನ್ನು ಮುಂದಿನ ಪೀಳಿಗೆಗೆ ಕೊಡಲು ಸಾಧ್ಯವಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಹೇಳಿದರು.

ತಾಲೂಕಿನ ಬೇವಿನಮಟ್ಟಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯಿಂದ ಗುರುವಾರ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಪ್ರೌಢಶಾಲೆ ಮುಖ್ಯಶಿಕ್ಷಕ ಪ್ರಶಾಂತ ಬಾದವಾಡಗಿ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.

ಸಂಸ್ಥೆ ಯೋಜನಾಧಿಕಾರಿ ಸಂತೋಷಕುಮಾರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹುನಗುಂದ ತಾಲೂಕಿನಲ್ಲಿ ಪ್ರತಿ ವರ್ಷವೂ ಶಾಲೆ ಆವರಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಒಂದು ಸಾವಿರ ಗಿಡ ನಾಟಿಯನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ವಲಯ ಅರಣ್ಯ ಅಧಿಕಾರಿ ಶಿವಶಂಕರ ಬಿ.ಎಸ್. ಮಾತನಾಡಿ, ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕೋಣ. ಮುಂದಿನ ಪೀಳಿಗೆಗಾಗಿ ಪರಿಸರವನ್ನು ಸಂರಕ್ಷಿಸುವ ಕಾರ್ಯಕ್ಕೆ ಮುಂದಾಗೋಣ ಎಂದು ತಿಳಿಸಿದರು.

ಮೇಲ್ವಿಚಾರಕ ಆನಂದ ಪಡಸಲಗಿ, ಅರುಣಕುಮಾರ ಮಠಪತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net