ನೆಟ್‌ವರ್ಕ್ ಸಿಗದ ಪ್ರದೇಶಗಳಲ್ಲಿ ಶಿಬಿರ ಆಯೋಜನೆ

CTD---0001.
Published on

ಚಿತ್ರದುರ್ಗ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ತಂತ್ರಾಂಶದಲ್ಲಿದ್ದ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದೆ ಎಂದು ಡಿಸಿ ಟಿ.ವೆಂಕಟೇಶ್ ಹೇ ಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಮೀಕ್ಷೆ ು ಪ್ರಗತಿ ಪರಿಶೀಲನೆ ಸಭೆ ಮಾತನಾಡಿ,ಆಯೋಗದ 3ನೇ ಆವೃತ್ತಿ ತಂತ್ರಾಂಶ ಉತ್ತಮವಾಗಿದ್ದು, ಗಣತಿದಾರರು ತ್ರೀವಗತಿಯಲ್ಲಿ ಸಮೀಕ್ಷೆ ನಡೆಸಬೇಕೆಂದರು.

ವಿದ್ಯುತ್ ಸಂಪರ್ಕ ಸಂಖ್ಯೆ ಆಧರಿಸಿ ಸ್ಟಿಕ್ಕರ್‌ಅಂಟಿಸುವ ಮೂಲಕ ಬೆಸ್ಕಾಂನಿಂದ ಸಮೀಕ್ಷೆಯ ಮನೆಗಳನ್ನು ಗುರುತಿಸಲಾಗಿದೆ. ಉಸ್ತು ವಾರಿ ಅಧಿಕಾರಿಗಳು ಬೆಸ್ಕಾಂ ಇಇಗಳೊಂದಿಗೆ ಸಮನ್ವಯ ಸಾಧಿಸಿ,ಮನೆಗಳ ವಿವರ, ಮಾಲಿಕರ ಮೊಬೈಲ್ ಸಂಪರ್ಕ ಸಂಖ್ಯೆಗಳನ್ನು ಪ ಡೆದುಕೊಂಡು ಗಣತಿದಾರರಿಗೆ ನೀಡಬೇಕು. ಗಣತಿದಾರರು ಸಮೀಕ್ಷೆಗೆ ತೆರಳುವ ಮುನ್ನಾ ದಿನವೇ ಕರೆ ಮಾಡಿ ಸಮೀಕ್ಷೆ ಆಗಮಿಸುತ್ತಿರುವ ಕುರಿತು ಮಾಹಿತಿ ನೀಡಬೇಕು. ನಾಲ್ಕು ದಿನ ಸಮೀಕ್ಷೆಗೆ ಹಿನ್ನಡೆಯಾಗಿದ್ದು,ಪ್ರತಿ ಗಣತಿದಾರರು ನಿತ್ಯ 10ರಿಂದ 20 ಮನೆಗಳ ಸಮೀಕ್ಷೆ ನಡೆಸ ಬೇಕು.ನೆಟ್‌ವರ್ಕ್ ಸಿಗದಿರುವ ಪ್ರದೇಶಗಳಲ್ಲಿ ಶಾಲೆ ಅಥವಾ ಗ್ರಾಪಂಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಸಮೀಕ್ಷೆ ನಡೆ ಸಲು ಆಯೋಗ ಅನುಮತಿಸಿದೆ ಎಂದರು.

ಜಿಪಂ ಸಿಇಒ ಡಾ.ಎಸ್.ಆಕಾಶ್,ಎಡಿಸಿ ಬಿ.ಟಿ.ಕುಮಾರಸ್ವಾಮಿ,ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ,ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net