

ವಿಜಯವಾಣಿ ಸುದ್ದಿಜಾಲ ಭಟ್ಕಳ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಸಂಭವಿಸಿದ ನೆರೆಯಿಂದ 14 ಜಿಲ್ಲೆಗಳು ಬಾಧಿತವಾಗಿದ್ದು, ಪರಿಹಾರ ಕಾರ್ಯಕ್ಕೆ ತಕ್ಷಣ 500 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಭಟ್ಕಳಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು.
ರಾಜ್ಯದ 185 ಹಳ್ಳಿಗಳು ಪ್ರವಾಹ ಪೀಡಿತವಾಗಿದ್ದು, 600 ಮನೆಗಳಿಗೆ ಸುಮಾರು 2400 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಒಟ್ಟು 9 ಜನ ಮೃತಪಟ್ಟಿದ್ದಾರೆ. ತಕ್ಷಣ ಪರಿಹಾರ ಒದಗಿಅಲಾಗುತ್ತಿದೆ ಎಂದರು.
ಅವರೇ ಉತ್ತರಿಸಬೇಕು ಪ್ರವಾಹ, ಸಾವು, ನೋವಿನಿಂದ ರಾಜ್ಯದ ಜನ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ವೈಯಕ್ತಿಕ ಉತ್ಸವಗಳು ಬೇಕೆ ಎಂಬ ಪ್ರಶ್ನೆಗೆ ಅವರೇ ಉತ್ತರಿಸಬೇಕು ಎಂದು ಸಿದ್ದರಾಮೋತ್ಸವದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ 75 ವರ್ಷಕ್ಕೆ ಕಾಲಿಟ್ಟಿದ್ದು ಸಂತಸ ತಂದಿದೆ. ಅವರಿಗೆ ಶುಭ ಹಾರೈಸುತ್ತೇನೆ. ಅವರು ದೀರ್ಘಕಾಲ ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಉತ್ಸವ ಆಚರಿಸಿಕೊಳ್ಳುವುದು ಅವರ ವೈಯಕ್ತಿಕ ವಿಚಾರ ಎಂದರು.