ನೆಹರು ನಗರ ಬೆಟ್ಟದಲ್ಲಿ ಬೆಂಕಿ ಅವಘಡ

17 vpt. 2
Published on

ವಿರಾಜಪೇಟೆ: ಕಳೆದ ಒಂದು ವಾರದ ಹಿಂದೆ ಮಲೆತಿರುಕೆ ಬೆಟ್ಟ ಹಾಗೂ ಎರಡು ದಿನಗಳ ಹಿಂದೆ ಪುರಸಭೆಯ ಕಸ ವಿಲೇವಾರಿ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಮರೆಯಾಗುವಷ್ಟರಲ್ಲಿಯೇ ನೆಹರುನಗರದಲ್ಲಿ ಸೋಮವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.

ಸ್ಥಳೀಯರ ಮುನ್ನೆಚ್ಚರಿಕೆಯಿಂದ ನೀರು ಮತ್ತು ಮರದ ಸೊಪ್ಪುಗಳಿಂದ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಇದರಿಂದಾಗಿ ಅಕ್ಕಪಕ್ಕದ ಮನೆಗಳಿಗೆ ಹಾನಿ ಸಂಭವಿಸುವುದು ತಪ್ಪಿದಂತಾಗಿದೆ. ತಕ್ಷಣ ಸ್ಥಳೀಯರು ಪುರಸಭೆಯ ಹಾಗೂ ಅರಣ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಪುರಸಭೆಯ ಕಸ ವಿಲೇವಾರಿ ಘಟಕದಲ್ಲಿ ಬೆಂಕಿ ನಂದಿಸುತ್ತಿದ್ದ ಅಗ್ನಿಶಾಮಕ ದಳದ ವಾಹನ ನೆಹರು ನಗರ ಬೆಟ್ಟಕ್ಕೆ ತೆರಳಿ ಬೆಂಕಿ ನಂದಿಸುವ ಮೂಲಕ ಬೆಂಕಿಯಿಂದ ಆಗುತ್ತಿದ್ದ ಭಾರಿ ಅನಾಹುತ ತಪ್ಪಿಸಲು ಯಶಸ್ವಿಯಾಗಿದೆ.

ಅಂದಾಜಿನ ಪ್ರಕಾರ 2ರಿಂದ 3 ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net