ನೇಕಾರರಿಗೆ ನೆರವು ಘೋಷಿಸಿ - ಸಚಿವ ಶ್ರೀಮಂತ ಪಾಟೀಲ

Shrimant Patil 9 Dec 19
Published on

ಕಾಗವಾಡ: ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಘೋಷಿಸಿದ್ದರಿಂದ ನೇಕಾರರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪರಿಹಾರ ಪ್ಯಾಕೇಜ್‌ನಲ್ಲಿ ವಿದ್ಯುತ್ ಮಗ್ಗ ಹಾಗೂ ಪೂರಕ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾ ರರು ಮತ್ತು ಕೂಲಿ ಕೆಲಸಗಾರರಿಗೂ ತಲಾ 2,000 ರೂ. ಆರ್ಥಿಕ ನೆರವು ಘೋಷಿಸಬೇಕು ಎಂದು ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಶ್ರೀಮಂತ ಪಾಟೀಲ ವಿನಂತಿಸಿದ್ದಾರೆ.

ರಾಜ್ಯದಲ್ಲಿರುವ 1.25 ಲಕ್ಷ ವಿದ್ಯುತ್ ಚಾಲಿತ ಘಟಕ (ಮಗ್ಗ) ಗಳಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದೀಗ ಲಾಕ್‌ಡೌನ್ ಘೋಷಣೆಯಿಂದ ಅವರ ಜೀವನ ನಿರ್ವಹಣೆ ಕಷ್ಟವಾಗಿದೆ. ಹಾಗಾಗಿ ಸರ್ಕಾರವು ಕೂಡಲೇ ತಲಾ 2 ಸಾವಿರ ರೂ.ರಂತೆ ನೆರವು ಘೋಷಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net