

ಬಾಗಲಕೋಟೆ: ಶ್ರಮ ಜೀವಿಗಳಾದ ಜಿಲ್ಲೆಯ ನೇಕಾರ ಬಗ್ಗೆ ನೇಕಾರರ ಸಂಘಗಳು ಇಟ್ಟಿರುವ ಬೇಡಿಕೆಗಳು ವಾಸ್ತವದಲ್ಲಿವೆ. ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೇಕಾರರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೇಕಾರರ ಸಮಸ್ಯೆಗಳು ನಿನ್ನೆ ಮೊನ್ನೆಯದಲ್ಲ. ಬಹಳ ವರ್ಷಗಳಿಂದ ಇದ್ದು, ಮೂಲ ವೃತ್ತಿಯನ್ನು ಬಿಟ್ಟು ಹೋಗುವ ಪರಿಸ್ಥಿತಿ ಉಂಟಾಗಿದೆ. ಅಲ್ಲದೇ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಕೆಲಸ ಮಾಡಬೇಕಾಗುತ್ತದೆ. ಕೆಲವೊಂದು ವೃತ್ತಿಗಳು ತೀಲಾಂಜಲಿಗೊAಡಿರುತ್ತವೆ. ನೇಕಾರಿಕೆ ಕೂಡಾ ಅಂತಹ ಪರಿಸ್ಥಿತಿಗೆ ಬರುತ್ತಿದೆ. ಈ ಬಗ್ಗೆ ಜವಳಿ ಸಚಿವರ ಜೊತೆ ಚರ್ಚಿಸಿ ನೇಕಾರರ ವೃತ್ತಿ ಉಳುವಿಗೆ ಮತ್ತು ಉತ್ಪನ್ನಗಳ ಮಾರಾಟಕ್ಕೆ ಸರ್ಕಾರದಿಂದ ಸೂಕ್ತ ನೆರವು ಒದಗಿಸುವ ಭರವಸೆ ನೀಡಿದರು.
ವೃತ್ತಿಪರ ನೇಕಾರರಿಗೆ ಕಟ್ಟಡ ಕಾರ್ಮಿಕ ಮಾದರಿಯ ಸೌಲಭ್ಯಗಳನ್ನು ಜಾರಿಮಾಡಿ ಗುರುತಿನ ಚೀಟಿ ನೀಡಬೇಕು ಅಂತ ನೇಕಾರರ ಮುಖಂಡರು ಮನವಿಗೆ ಉತ್ತರಿಸಿದ ಕಾರ್ಮಿಕ ಇಲಾಖೆಯ ಅಽಕಾರಿ ರಮೇಶ ಸುಂಬಡದ ಕಟ್ಟಡ ಕಾರ್ಮಿಕರಿಗೆ ದೊರೆಯುವ ಸೌಲಭ್ಯ ನೇಕಾರರಿಗೆ ಕೊಡಲು ಅವಕಾಶವಿರುವದಿಲ್ಲ ಎಂದು ಸ್ಪಷ್ಟನೆ ನೀಡಿದರು. ಈ ಸಂದರ್ಭದಲ್ಲಿ ಜವಳಿ ಇಲಾಖೆ ಉಪನಿರ್ದೇಶಕ ಪೀರಜಾಧೆ ಮಾತನಾಡಿ, ನೇಕಾರರಿಗೆ ಹಲವು ಯೋಜನೆಗಳ ಮೂಲಕ ಸೌಲಭ್ಯ ಒದಗಿಸಲಾಗುತ್ತಿದೆ. ಈಗಾಗಲೇ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ೧೩೧೮೩ ಕೈಮಗ್ಗ ಮತ್ತು ೨೩೭೩೫ ವಿದ್ಯುತ್ ಮಗ್ಗ ನೇಕಾರರಿಗೆ ಗುರುತಿನ ಚೀಟಿ ನೀಡಲಾಗಿದೆ. ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ೯ ನೇಕಾರರ ಪೈಕಿ ೩ ಜನಕ್ಕೆ ತಲಾ ೫ ಲಕ್ಷ ರೂ.ಗಳ ಪರಿಹಾರಧನ ವಿತರಿಸಲಾಗಿದೆ ಎಂದು ತಿಳಿಸಿದರು.
ನೇಕಾರರ ಸಮಸ್ಯೆ ಬಿಚ್ಚಿಟ್ಟ ಹೋರಾಟಗಾರರು..
ಇನ್ನು ಸಭೆಯಲ್ಲಿ ಭಾಗವಹಿಸಿದ್ದ ನೇಕಾರರ ಮುಖಂಡ ಶಿವಲಿಂಗ ಟಿರಕಿ ಮಾತನಾಡಿ, ರಾಜ್ಯದ ನೇಕಾರರಿಗೆ ಒಂದು ಬಾರಿ ಸಂಪೂರ್ಣ ಸಾಲ ಮನ್ನಾ, ೫೫ ವರ್ಷ ಮೇಲ್ಪಟ್ಟ ನೇಕಾರರಿಗೆ ೫ ಸಾವಿರ ಮಾಶಾಸನ ಜಾರಿ, ನಿವೇಶನ ಇಲ್ಲದ ನೇಕಾರರಿಗೆ ಕೆ.ಎಚ್.ಡಿಸಿ ನಿಗಮದಿಂದ ನಿವೇಶನ ಹಂಚಿಕೆ, ಕೇಂದ್ರ ಸರಕಾರ ಕಿಸಾನ್ ಸಮ್ಮಾನ ಯೋಜನೆಯಂತೆ ನೇಕಾರರಿಗೂ ಬುನಕರ ಸಮ್ಮಾನ ಯೋಜನೆ ಜಾರಿ ಮಾಡಬೇಕು, ಕೈಮಗ್ಗ ಮತ್ತು ಜವಳಿ ಇಲಾಖೆಗೆ ಹೆಚ್ಚಿನ ಅನುದಾನ ನಿಗದಿ ಮಾಡಬೇಕು, ಅಸಂಘಟಿತ ವಲಯ ಕಾರ್ಮಿಕರ ಗುರುತಿನ ಚೀಟಿ ಹಂಚಿಕೆ, ನೇಕಾರರ ವಿವಿಧ ಯೋಜನೆಗಳಿಗೆ ಅನುದಾನವಿಲ್ಲದೇ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಬಜೆಟ್‌ನಲ್ಲಿ ಅನುದಾನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವ ಆರ್.ಬಿ.ತಿಮ್ಮಾಪುರ ಪ್ರಕ್ರಿಯೆ ನೀಡಿ, ನೇಕಾರರ ಬೇಡಿಕೆಗಳ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಅಲ್ಲದೆ ರೈಲು ಮತ್ತು ವಿಮಾನ ನಿಲ್ದಾಣದಲ್ಲಿ ನೇಕಾರರು ಉತ್ಪಾದಿಸಿದ ಉತ್ಪನ್ನಗಳನ್ನು ನೇರ ಮಾರಾಟ ಮಾಡಲು ಹಾಗೂ ಮಳಿಗೆ ಸ್ಥಾಪಿಸಲು ಅವಕಾಶ ನೀಡುವ ಕುರಿತು ಸರ್ಕಾರ ಮಟ್ಟದಲ್ಲಿ ನಿರ್ಧಾರ ಮಾಡಿ ನಂತರ ಕೇಂದ್ರಕ್ಕೆ ಮನವರಿಕೆ ಮಾಡಲಾಗುವುದು, ೧೦ ಎಚ್‌ಪಿ ವರೆಗೆ ಉಚಿತ ವಿದ್ಯುತ್ ಬೇಡಿಕೆ ಬಗ್ಗೆಯೂ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ವಿ.ಪ ಸದಸ್ಯ ಪಿ.ಎಚ್.ಪೂಜಾರ, ಜಿಲ್ಲಾಽಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ, ಉಪ ಅರಣ್ಯ ಸಂರಕ್ಷಣಾಽಕಾರಿ ರುಥ್ರೇನ್, ಜಿ.ಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಉಪವಿಭಾಗಾಽಕಾರಿ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ ಸೇರಿದಂತೆ ಇತರೆ ಅಽಕಾರಿಗಳು ಉಪಸ್ಥಿತರಿದ್ದರು.