ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

11kkr ( sachin death
ಕಿಕ್ಕೇರಿ ಹೋಬಳಿಯ ಉದ್ದಿನಮಲ್ಲನಹೊಸೂರು ಗ್ರಾಮದ ಮೃತ ಯುವಕ ಸಚಿನ್.
Published on

ಕಿಕ್ಕೇರಿ: ಹೋಬಳಿಯ ಉದ್ದಿನಮಲ್ಲನಹೊಸೂರು ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಗ್ರಾಮದ ಕುಮಾರ್ ಎಂಬುವರ ಪುತ್ರ ಸಚಿನ್(21) ಮೃತ ಯುವಕ. ಟ್ರಾೃಕ್ಟರ್ ಚಾಲಕನಾಗಿದ್ದ ಈತ ಕಿಕ್ಕೇರಿಯಲ್ಲಿ ತನ್ನ ಸ್ನೇಹಿತನ ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಂಡು ವಾಪಸ್ಸಾಗಿದ್ದ. ಆದರೆ ಮುಂಜಾನೆ ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬೆಳಗ್ಗೆ ಕಸ ಹಾಕಲು ಜಮೀನಿಗೆ ತೆರಳಿದ್ದ ಮೃತನ ಚಿಕ್ಕಪ್ಪ ಶಿವಕುಮಾರ, ನೇಣು ಬಿಗಿದ ಸ್ಥಿತಿಯಲ್ಲಿ ಸಚಿನ್ ಮೃತದೇಹ ಕಂಡು ಕಿಕ್ಕೇರಿ ಪೊಲೀಸ್ ಠಾಣೆಗೆ ವಿಷಯ ತಿಳಿಸಿದರು. ಕಿಕ್ಕೇರಿ ಇನ್ಸ್‌ಪೆಕ್ಟರ್ ಸುನೀಲ್‌ಕುಮಾರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net