ನೇಣು ಬಿಗಿದು ಯುವಕ ಆತ್ಮಹತ್ಯೆ

Sucide
Published on

ಖಾನಾಪುರ: ಸಮೀಪದ ನೆರ್ಸಾ-ಕೊಂಗಲ-ಗವಾಲಿ ರಸ್ತೆಯ ಕಾಡಿನಲ್ಲಿ ಮರಕ್ಕೆ ಹಗ್ಗ ಕಟ್ಟಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಗವಾಲಿಯ ಪಾಂಡುರಂಗ ಶ್ರೀಕಾಂತ ಗಾಂವ್ಕರ (26) ಮೃತ.

ಕೆಲವು ದಿನಗಳಿಂದ ಮಾನಸಿಕ ಒತ್ತಡದಲ್ಲಿದ್ದ ಪಾಂಡುರಂಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಾನಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಖಾನಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net