ನೇಣು ಬಿಗಿದುಕೊಂಡು ಯೋಧ ಆತ್ಮಹತ್ಯೆ

crime
Published on

ನೇಣು ಬಿಗಿದುಕೊಂಡು ಯೋಧ ಆತ್ಮಹತ್ಯೆ

ಬೆಳಗಾವಿ : ಬಿಎಸ್ ಎಫ್ ಯೋಧ‌ನೊರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಬುಧವಾರ ನಡೆದಿದೆ.

ಮೂಲತಃ ಕಾಗವಾಡ ತಾಲೂಕಿನ ಶೇಡಬಾಳ ಸ್ಟೇಷನ್ ಗ್ರಾಮದ 45 ವರ್ಷದ ಬಿಎಸ್ ಎಫ್ ಹವಾಲ್ದಾರ ಯೋಧ ದಗಡು ಮಹಾದೇವ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯೋಧ.ಈತ ನಗರ ವಿಜಯ ನಗರದ 4 ನೇ ಕ್ರಾಸ್ ನಲ್ಲಿ ವಾಸವಾಗಿರುವ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಸ್ತುತ ಅಸ್ಸಾಂ ರಾಜ್ಯದ ಗೋವಾಟಿಯಲ್ಲಿ 170 ಬಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಕ್ಕಳ ಶಿಕ್ಷಣಕ್ಕಾಗಿ ನಗರದ ವಿಜಯ ನಗರದಲ್ಲಿ ವಾಸವಾಗಿದ್ದರು. ರಜೆಯ ಮೇಲೆ ಬಂದಿದ್ದ ಇವರು ಆರೋಗ್ಯ ಸಮಸ್ಯೆಯಿಂದ ಬೆಳಗಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ತಿಳಿದು ಬಂದಿದ್ದು,

ನಗರದ ಕ್ಯಾಂಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಯೋಧ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಈ ಕುರಿತು ತನಿಖೆ ಮಡೆಸುತ್ತಿರುವುದಾಗಿ ನಗರ ಪೊಲೀಸ್ ಆಯುಕ್ತ ಭೂಷನ್ ಬೋರಸೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net