ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

20 upbr 2- kalyani nugganati sucide
Published on

ಉಪ್ಪಿನಬೆಟಗೇರಿ: ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಕಲ್ಯಾಣಿ ನಾಗಪ್ಪ ನುಗ್ಗಾನಟ್ಟಿ (32) ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿಗೆ ಸಂಬಂಧಿಸಿದಂತೆ ವಿವಿಧ ಬ್ಯಾಂಕ್​ಗಳಲ್ಲಿ ಸಾಲ ಮಾಡಿಕೊಂಡಿದ್ದನೆಂದು ತಿಳಿದು ಬಂದಿದೆ. ಸಾಲದ ಮೊತ್ತ ಎಷ್ಟು ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಗರಗ ಠಾಣೆ ಪಿಎಸ್​ಐ ಪ್ರಸಾದ ಪೆಣೆಕರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತ ಆತ್ಮಹತ್ಯೆ ಎಂಬ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪಿಎಸ್​ಐ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net