

ಹಾಸನ: ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಯನ್ನು ವಾಪಸ್ ಪಡೆಯಬೇಕು ಹಾಗೂ ಅತಿಥಿ ಉಪನ್ಯಾಸಕರನ್ನು ಕಾಯಂ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯಾದ್ಯಂತ 14564 ಅತಿಥಿ ಉಪನ್ಯಾಸಕರು ಕನಿಷ್ಠ ವೇತನ ಪಡೆದು ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಕೋವಿಡ್-19 ಸಂದರ್ಭದಲ್ಲಿ ನಾಲ್ಕು ತಿಂಗಳಿಂದ ವೇತನವಿಲ್ಲದೆ ಕುಟುಂಬ ನಿರ್ವಹಣೆ ಸಾಧ್ಯವಾಗದೆ ತೀವ್ರ ತೊಂದರೆಗೆ ಸಿಲುಕಿದ್ದಾರೆ. ಆದರೆ ಸರ್ಕಾರ ಗಾಯದ ಮೇಲೆ ಬರೆ ಎಳೆದಂತೆ ಜು.7ರಂದು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಇದರಿಂದ 2400 ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಹೊಸ ನೇಮಕಾತಿ ಬದಲಿಗೆ ಅತಿಥಿ ಉಪನ್ಯಾಸಕರನ್ನೇ ಅರ್ಹತೆಗೆ ಕಾಯಂ ಮಾಡಿಕೊಂಡರೆ ಅನುಕೂಲವಾಗುತ್ತದೆ. ಜತೆಗೆ ಜೀವನೋಪಾಯಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.
ಸಮನ್ವಯ ಸಮಿತಿ ಜಿಲ್ಲಾ ಗೌರವಾಧ್ಯಕ್ಷ ಸಿ.ಶಿವಪ್ಪ, ಅಧ್ಯಕ್ಷ ಯತೀಶ್ ಕಬ್ಬಾಳು, ಎಂ.ಎಸ್.ಆನಂದ್‌ಕುಮಾರ್, ಜಯ ಕರ್ನಾಟಕ ಸಂಘಟನೆಯ ಸಂಗಮ್ ಇತರರಿದ್ದರು.