ನೇಮಕಾತಿಗೆ ಅಂಗವಿಕಲರಿಂದ ಅರ್ಜಿ ಆಹ್ವಾನ

Published on

ಕೆ.ಆರ್.ಪೇಟೆ: ತಾಲೂಕಿನ ಮಾದಾಪುರ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಯೋಜನೆಯ ಕಾರ್ಯಕರ್ತರ ನೇಮಕಾತಿಗೆ ಅರ್ಹ ಅಂಗವಿಕಲರಿಂದ ಅರ್ಜಿ ಆಹ್ವಾನಿಸಲಾಗಿದೆ.


ಕನಿಷ್ಠ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು. ಆಯಾ ಗ್ರಾ.ಪಂ.ವ್ಯಾಪ್ತಿಯಲ್ಲಿ ವಾಸಿಸುತ್ತಿರುವವರು ಮಾತ್ರ ಅರ್ಜಿ ಸಲ್ಲಿಸಬೇಕು. ತಾಲೂಕು ಪಂಚಾಯಿತಿ ಕಚೇರಿಯಲ್ಲಿರುವ ಅಂಗವಿಕಲರ ತಾಲೂಕು ಸಂಯೋಜಕರಿಂದ ಅರ್ಜಿ ಪಡೆದು ಆ.28ರ ಒಳಗೆ ಸಲ್ಲಿಸುವಂತೆ ತಾಪಂ ಇಒ ಬಿ.ಎಸ್. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ: 9900738434 ಸಂಪರ್ಕಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net