ನೈಜ ಕಾರ್ಯಕರ್ತರು ಜೆಡಿಎಸ್‌ನಲ್ಲೇ ಇದ್ದಾರೆ

24 vtp 1 pressmeet jds
ಜೆಡಿಎಸ್ ಪತ್ರಿಕಾಗೋಷ್ಠಿ.
Published on

ವಿರಾಜಪೇಟೆ: ಜೆಡಿಎಸ್ ಮಾಜಿ ಅಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡರೂ ಯಾವುದೇ ನಷ್ಟ ಇಲ್ಲ. ನೈಜ ಕಾರ್ಯಕರ್ತರು ಈಗಲು ಜೆಡಿಎಸ್ ಪಕ್ಷದಲ್ಲಿಯೇ ಇದ್ದಾರೆ ಎಂದು ವಿರಾಜಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ಎ. ಮಂಜುನಾಥ್ ಹೇಳಿದರು.

ಜೆಡಿಎಸ್ ಪಕ್ಷ ತನ್ನದೇ ಆದ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಒಬ್ಬ ನಾಯಕ ಪಕ್ಷ ಬಿಟ್ಟು ಹೋಗಿದ್ದಾರೆ ವಿನಾಃ ಯಾವುದೇ ಕಾರ್ಯಕರ್ತರು ಹೋಗಿಲ್ಲ. ಈಗಲು ಕೂಡ ಜೆಡಿಎಸ್ ಪಕ್ಷ ಅಪಾರ ಕಾರ್ಯಕರ್ತರನ್ನು ಹೊಂದಿದ್ದು, ಈ ಬಾರಿ ಚುನಾವಣೆಯಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈಗಾಗಲೇ ಕುಮಾರಸ್ವಾಮಿ ಅವರ ಕನಸಿನ ‘ಪಂಚರತ್ನ’ ಯೊಜನೆಯ ರಥಯಾತ್ರೆ 70 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮುಗಿಸಿದೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ವೇಳೆ ಮಾಡಿರುವ ಜನಪರ ಯೋಜನೆಗಳು ಈ ಬಾರಿ ಚುನಾವಣೆಯಲ್ಲಿ ವರದಾನವಾಗಲಿದೆ. ಮುಂದಿನ ತಿಂಗಳು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ ಎಂದು ಹೇಳಿದರು.

ವಿರಾಜಪೇಟೆ ಪುರಸಭೆಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಮಾಸಿಕ ಸಭೆ ನಡೆಸದೆ ನಾಲ್ಕು ತಿಂಗಳಾಗಿದೆ. ಈಗಾಗಲೇ ಪಟ್ಟಣದಲ್ಲಿ ಕುಡಿಯಲು ನೀರಿಲ್ಲ. ಅದರ ಬಗ್ಗೆ ಚಿಂತಿಸುತ್ತಿಲ್ಲ. ರಸ್ತೆಗಳನ್ನು ತರಾತುರಿಯಲ್ಲಿ ಮಾಡಲಾಗುತ್ತಿದೆ. ಕೂಡಲೇ ಜಿಲ್ಲಾಧಿಕಾರಿ ಕಳಪೆ ಕಾಮಗಾರಿಯಿಂದ ಕೂಡಿರುವ ರಸ್ತೆಗಳನ್ನು ಪರೀಶಿಲಿಸಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿದರು.

ಜೆಡಿಎಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಹರ್ಷ, ತಾಲೂಕು ಖಜಾಂಚಿ ಪಾಣತ್ತಲೆ ಸತ್ಯ, ಮಾನವ ಹಕ್ಕುಗಳ ಕಾರ್ಮಿಕ ಕುಂದುಕೊರತೆಗಳ ವಿಭಾಗದ ತಾಲೂಕು ಅಧಕ್ಷ ಕೆ.ಎಸ್. ರಜಾಕ್, ಕ್ರೈಸ್ತ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಕ್ರಿಸ್ಟಿ, ರೈತ ಘಟಕದ ತಾಲೂಕು ಅಧ್ಯಕ್ಷ ಬಾಳೆಕುಟ್ಟಿರ ದಿನಿ ಬೋಪಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net