ನೈತಿಕತೆ ರೂಢಿಸಿಕೊಂಡಾಗ ಅನೈತಿಕತೆಯ ಪ್ರಶ್ನೆಯೇ ಇಲ್ಲ ಸಿಎಂ ಬೊಮ್ಮಾಯಿ

IMG_20211013_100803
Published on

ಮಂಗಳೂರು: ಜೀವನದಲ್ಲಿ ಪ್ರತಿಯೊಬ್ಬರೂ ನೈತಿಕತೆ ರೂಢಿಸಿಕೊಂಡಾಗ ಅನೈತಿಕ ಪೊಲೀಸ್ ಗಿರಿಯ ಪ್ರಶ್ನೆ ಬರುವುದಿಲ್ಲ. ಸಾಮಾಜಿಕ ಸಾಮರಸ್ಯ ಕಾಯ್ದುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬುಧವಾರ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ಕರೊನಾ ಹಿನ್ನೆಲೆಯಲ್ಲಿ ಕೇರಳ ಪ್ರವೇಶ ನಿರ್ಬಂಧ ತೆರವು ಮಾಡಲು ಶೀಘ್ರ ಕ್ರಮ ವಹಿಸಲಾಗುವುದು. ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು. ಕಲಿದ್ದಲು ಸಮಸ್ಯೆ ವ್ಯವಸ್ಥಿತವಾಗಿ ಪರಿಹರಿಸಲಾಗುವುದು ಎಂದರು.

ಸಚಿವ ಸುನಿಲ್ ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕ ಭರತ್ ಶೆಟ್ಟಿ ಮೊದಲಾದವರು ಜತೆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net