

ಚಿಕ್ಕಮಗಳೂರು: ಅಜ್ಜಂಪುರದಲ್ಲಿ ನಡೆದ ಗುರು ಸಿದ್ದರಾಮೇಶ್ವರ ಭವನದಲ್ಲಿ ಏರ್ಪಡಿಸಲಾಗಿದ್ದ ನೊಳಂಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ತ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಶಾಸಕ ಡಿ.ಎಸ್.ಸುರೇಶ್ ಅವರು ನೊಳಂಬ ಸಮಾಜದ ಬಗ್ಗೆ ಉದ್ಧಟತನದ ಹೇಳಿಕೆ ನೀಡಿದ್ದು, ಇದರ ವಿರುದ್ಧ ಜು. ೨೫ರಂದು ಮಾಜಿ ಶಾಸಕ ಡಿ.ಎಸ್.ಸುರೇಶ್ ಮನೆ ಎದುರು ಸಮಾಜದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸಮಾಜದ ಮುಖಂಡ ಹಾಗೂ ವಕೀಲ ರವಿ ಶ್ಯಾನುಭೋಗ್ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಸುರೇಶ್ ಅವರು ತಮ್ಮ ಹೇಳಿಕೆಯನ್ನು ವಾಪಾಸ್ ಪಡೆಯಬೇಕು ಮತ್ತು ನೊಳಂಬ ಸಮಾಜದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಇಲ್ಲದಿದ್ದರೆ ಜು.೨೫ ರಂದು ಸುರೇಶ್ ಅವರ ಮನೆ ಮುಂದೆ ಸಮಾಜದ ಸ್ವಾಭಿಮಾನಿ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಮಾಜಿ ಶಾಸಕ ಎಸ್.ಎಂ.ನಾಗರಾಜ್ ಅವರನ್ನು ಓಲೈಸುವ ಸಲುವಾಗಿ ಯಾರಿಗೂ ಹೆದರಬೇಡಿ, ನಾವು ನಿಮ್ಮೊಂದಿಗೆ ಇದ್ದೇವೆ ಎಂದು ನೀಡಿರುವ ಉದ್ದಟತನದ ಹೇಳಿಕೆಯನ್ನು ಕೂಡಲೇ ವಾಪಾಸ್ ಪಡೆದು ಬಹಿರಂಗವಾಗಿ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.